ಬೆಳಗಾವಿ. ಜ. 30: ಜಿಲ್ಲೆ ಬೈಲಹೊಂಗಲ ಪಟ್ಟಣದಲ್ಲಿ 7 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಸುಸಜ್ಜಿತ ಬಸ್ ನಿಲ್ದಾಣವನ್ನು ಇಂದು ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಗಳಾದ ಶ್ರೀ ಲಕ್ಷ್ಮಣ್ ಸವದಿ ಹಾಗೂ ಭಾರತ ಸರ್ಕಾರದ ರಾಜ್ಯ ರೈಲ್ವೆ ಸಚಿವರಾದ ಶ್ರೀ ಸುರೇಶ್ ಅಂಗಡಿ ಮತ್ತು ಬೈಲಹೊಂಗಲ ತಾಲೂಕಿನ ಶಾಸಕರಾದ ಮಹಾಂತೇಶ್ ಕೌಜಲಗಿ ರವರ ಸಮ್ಮುಖದಲ್ಲಿ ದೀಪ ಬೆಳಗುವುದರ ಮೂಲಕ ಉದ್ಘಾಟನೆ ಮಾಡಿದರು.
ಮತ್ತು ಅಪಘಾತ ರೈತ ಅಪಘಾತ ರಹಿತ ಚಾಲಕರಿಗೆ ಬೆಳ್ಳಿ ಪದಕವನ್ನು ನೀಡಿ ಅವರಿಗೆ ಗೌರವವನ್ನು ಸಮರ್ಪಿಸಲಾಯಿತು. ಇದೇ ಸಂದರ್ಭದಲ್ಲಿ ಸೌದತ್ತಿ ತಾಲೂಕಿನ ಶಾಸಕರಾದ ಆನಂದ್ ಮಾಮನಿ, ಬೈಲಹೊಂಗಲ ತಾಲೂಕಿನ ಮಾಜಿ ಶಾಸಕರಾದ ವಿಶ್ವನಾಥ್ ಪಾಟೀಲ್, ಮಹಾಂತೇಶ ಕವಟಗಿಮಠ, ಜಗದೀಶ್ ಮೆಟಗುಡ್ಡ, ಮತ್ತಿತರರು ಉಪಸ್ಥಿತರಿದ್ದರು.