ಪೊಲೀಸ್ ಪೇದೆಗಳ ಮೇಲೆ ಹಲ್ಲೆ

ಪೊಲೀಸ್ ಪೇದೆಗಳ ಮೇಲೆ ಹಲ್ಲೆ

ಬೆಂಗಳೂರು, ಮಾ. 25: ಕರ್ನಾಟಕ ಸೇರಿ ದೇಶದಾದ್ಯಂತ ಲಾಕ್ ಡೌನ್ ಗೋಷಣೆ ಮಾಡಿದ್ದರೂ ಸಹ ಸರ್ವಜನಿಕರು ಸರಕಾರದ ಆದೇಶವನ್ನು ಪಾಲಿಸುತ್ತಿಲ್ಲ. ಸರಕಾರದ ಆದೇಶವನ್ನು ಉಲ್ಲಂಘಿಸಿದ ಸಾರ್ವಜನಿಕರಲ್ಲಿ ಪೊಲೀಸರು ಮನೆಯಿಂದ ಹೊರಗೆ ಬರಬೇಡಿ ದಯವಿಟ್ಟು ಮನೆಗೆ ಹೋಗಿ ಎಂದಿದ್ದಕ್ಕೆ ಪೊಲೀಸ್ ಪೇದಗಳ ಮೇಲೆ ಬೆಂಗಳೂರು ನಗರದಲ್ಲಿ ಹಲ್ಲೆ ನಡೆಸಿದ್ದಾರೆ.

ಇಂತಹ ಸಂದರ್ಭದಲ್ಲಿ ಬೀದಿ ಬದಿಯಲ್ಲಿ ಗುಂಪುಕಟ್ಟಿಕೊಂಡು ನಿಂತಿದ್ದಂತ ವ್ಯಕ್ತಿಗಳಿಗೆ ಮನೆಯಿಂದ ಹೊರಗೆ ಬರಬೇಡಿ.. ಒಳಗೆ ಹೋಗಿ ಎಂದ ಪೊಲೀಸ್ ಪೇದಗಳಿಗೆ ಕಿಡಿಗೇಡಿಗಳು ಹಲ್ಲೆ ಮಾಡಿರುವ ಘಟನೆ ಸಂಜಯ್ ನಗರದಲ್ಲಿ ನಡೆದಿದೆ.

ಪೊಲೀಸರನ್ನೇ ಇಬ್ಬರು ಕಿಡಿಗೇಡಿಗಳು ಮನಬಂದಂತೆ ಥಳಿಸಿದ್ದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಈ ಎಲ್ಲಾ ದೃಶ್ಯಾವಳಿಗಳು ಸ್ಥಳದಲ್ಲಿದ್ದಂತ ಮತ್ತೊಬ್ಬರ ಕ್ಯಾಮರಾದಲ್ಲಿ ಸೆರೆಯಾಗಿವೆ. ಕೂಡಲೇ ಕಿಡಿಗೇಡಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು.. ದೂರು ದಾಖಲಿಸಿ, ಜೈಲಿಗೆ ಅಟ್ಟಿದ್ದಾರೆ.

ಪೊಲೀಸರು ತಮ್ಮ ಪ್ರಾಣವನ್ನೇ ಲೆಕ್ಕಿಸದೆ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ ದಯವಿಟ್ಟು ಪೊಲೀಸರಿಗೆ ಸಾರ್ವಜನಿಕರು ಸಹಕಾರ ನೀಡಿ.

ಫ್ರೆಶ್ ನ್ಯೂಸ್

Latest Posts

Featured Videos