ನೇಕಾರ ಸಮ್ಮಾನ್ ಯೋಜನೆಗೆ 10.96 ಕೋಟಿ!

  • In State
  • July 6, 2020
  • 203 Views
ನೇಕಾರ ಸಮ್ಮಾನ್ ಯೋಜನೆಗೆ 10.96 ಕೋಟಿ!

ಬೆಂಗಳೂರು: ನೇಕಾರ ಸಮ್ಮಾನ್ ಯೋಜನೆಯಡಿಯಲ್ಲಿ ಪ್ರತಿ ವರ್ಷ 10.96 ಕೋಟಿ ರೂ. ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನೇಕಾರ ಸಮ್ಮಾನ್ ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದರು.

ಕೈಮಗ್ಗ ನೇಕಾರರಿಗೆ ಮೊದಲನೇ ಹಂತದಲ್ಲಿ 19,744 ಕೈಮಗ್ಗ ನೇಕಾರರಿಗೆ ನೇರ ನಗದು ವರ್ಗಾವಣೆ ಮಾಡುವ ಮುಖಾಂತರ ಪ್ರತಿ ನೇಕಾರರಿಗೆ ರೂ. 2,000/- ಗಳನ್ನು ವಾರ್ಷಿಕ ಆರ್ಥಿಕ ನೆರವನ್ನು ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆಗೆ ಮಾಡಲಾಗುತ್ತಿದೆ.

ನಾಲ್ಕನೇ ರಾಷ್ಟ್ರೀಯ ಕೈಮಗ್ಗ ಗಣತಿ ಪ್ರಕಾರ ರಾಜ್ಯದಲ್ಲಿ ಒಟ್ಟು 54,789 ಕೈಮಗ್ಗ ನೇಕಾರರು ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿನ ರೇಷ್ಮೇ, ಹತ್ತಿ ಹಾಗೂ ಉಣ್ಣೆ ವಲಯದ ಕೈಮಗ್ಗ ಮತ್ತು ಪೂರಕ ಚಟುವಟಿಕೆಗಳಲ್ಲಿ ತೊಡಗಿರುವ ಕೈಮಗ್ಗ ನೇಕಾರರು ಈ ಯೋಜನೆಗೆ ಅರ್ಹರಾಗಿರುತ್ತಾರೆ ಎಂದು ನುಡಿದರು.

ಫ್ರೆಶ್ ನ್ಯೂಸ್

Latest Posts

Featured Videos