ಕಾಂಗ್ರೆಸ್ ಗೆ ಸವಾಲು ಹಾಕಿದ ಸಂಸದ ಸದಾನಂದಗೌಡ

ಕಾಂಗ್ರೆಸ್ ಗೆ ಸವಾಲು ಹಾಕಿದ ಸಂಸದ ಸದಾನಂದಗೌಡ

ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ರಾಜ್ಯಕ್ಕೆ ನೀಡಿದ ಕೊಡುಗೆ ಬಗ್ಗೆ ಆರ್ ಟಿಐನಲ್ಲಿ ಮಾಹಿತಿ ಇಲ್ಲ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ವಿ.ಸದಾನಂದಗೌಡರೇ ರಾಜ್ಯ ಕಾಂಗ್ರೆಸ್ಸಿಗೆ ಸವಾಲು ಹಾಕಿದ್ದಾರೆ.

ಈ ಕುರಿತು ಟ್ವೀಟರ್ ನಲ್ಲಿ ಬಹಿರಂಗ ಸವಾಲು ಹಾಕಿರುವ ಅವರು, ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ನಾನು ಎಲ್ಲ ದಾಖಲೆಯೊಂದಿಗೆ ಬರುತ್ತೇನೆ. ನೀವು ಹರಡುತ್ತಿರುವ ಸುಳ್ಳನ್ನು ಸಾಬೀತು ಪಡಿಸುವಲ್ಲಿ ನೀವು ವಿಫಲರಾದರೆ ನಿಮ್ಮ ರಾಷ್ಟ್ರೀಯ ಅಧ್ಯಕ್ಷರು ಬೆಂಗಳೂರು ಉತ್ತರ ಕ್ಷೇತ್ರದ ಮತದಾರರ ಬಳಿ ಕ್ಷಮೆ ಕೇಳಬೇಕು ಎಂದು ಸವಾಲು ಹಾಕಿದ್ದಾರೆ.

ಕಾಂಗ್ರೆಸ್ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರು ಕಳೆದ 5 ವರ್ಷಗಳಿಂದ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಆರ್ ಟಿಐ ಮಾಹಿತಿ ನೀಡಿದೆ. ಸದಾ ನಗುತ್ತಿರುವ ಬಿಜೆಪಿ ಮುಖಂಡರು ಸಾಮಾನ್ಯ ಜನರ ಮುಖದಲ್ಲಿ ಸಂತೋಷ ಮೂಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಬರೆದು ಡಿವಿಎಸ್ ಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿ ಟೀಕೆ ಮಾಡಿತ್ತು.

ಫ್ರೆಶ್ ನ್ಯೂಸ್

Latest Posts

Featured Videos