ಕೆ.ಆರ್.ಪುರ: ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವಂತೆ ಬೆಂಗಳೂರು ಪೂರ್ವ ತಾಲ್ಲೂಕು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಎಂ.ಗಣೇಶ್ ಅವರು ಮನವಿ ಮಾಡಿದರು.
ಬೆಂಗಳೂರು ಪೂರ್ವ ತಾಲ್ಲೂಕಿನಲ್ಲಿ ಮಹರ್ಷಿ ವಾಲ್ಮೀಕಿ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸಂಘದಿಂದ ಶೈಕ್ಷಣಿಕ ಹಾಗೂ ಸಮಾಜದ ಅಭಿವೃದ್ಧಿಗೆ ಒಮ್ಮತದ ನಡೆ ಅಗತ್ಯವಾಗಿದ್ದು,ಏಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು.
ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಮಾದಾಯವನ್ನು ಶೈಕ್ಷಣಿಕವಾಗಿ ಮುಂಚೂಣಿಗೆ ತರುವಂತೆ ಹೇಳಿದರು. ಈ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರೊಂದಿಗೆ ಚರ್ಚಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ತಿಳಿಸಿದರು.
ಮಹಾಪೋಷಕ ಬಾಕ್ಸರ್ ನಾಗರಾಜ್, ಮುಖಂಡರಾದ ಎಂ.ಮಂಜುನಾಥ್, ಅರ್ಜುನ್ ನಾಗೇಂದ್ರ, ಕೆ.ಎಮ್.ಗಣೇಶ್, ಕಟ್ಟುಗೊಲ್ಲಹಳ್ಳಿ ಶಿವಕುಮಾರ್, ದಿವಾಕರ್ , ಅಜಯ್ ನಾಯಕ ಮತ್ತಿತರರು ಇದ್ದರು.