ಬೆಂಗಳೂರು: ಸೇವೆಯಲ್ಲಿ
ಮುಂದುವರೆಸಲು ಮತ್ತು ನಿವೃತ್ತಿಯವರೆಗೂ ಸೇವಾ ಭದ್ರತೆ ನೀಡಲು ಆಗ್ರಹಿಸಿ ಕರ್ನಾಟಕ ರಾಜ್ಯ
ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘಟನೆ ನೇತೃತ್ವದಲ್ಲಿ
ಸಾವಿರಾರು ನೌಕರರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಇಂದು
ನಗರದ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಿಂದ ಸ್ವಾಂತಂತ್ರ್ಯ ಉದ್ಯಾನದವರೆಗೆ ಪ್ರತಿಭಟನಾ
ಧರಣಿ ನಡೆಸಿದ ನೌಕರರು, ಇಂದಿನಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟ ಸಾಮೂಹಿಕ ಧರಣಿ
ನಡೆಸಲಿದ್ದಾರೆ.
ಕೆಲಸದಿಂದ ತೆಗೆದು ಹಾಕುವ ಆದೇಶವನ್ನು ಹಿಂಪಡೆದು ಹೊರಗುತ್ತಿಗೆ ನೌಕರರನ್ನು ಕೆಲಸದಲ್ಲಿ ಮುಂದುವರೆಸಬೇಕು. ಬಾಕಿ ವೇತನ ಪಾವತಿಸಬೇಕು ಹಾಗೂ ಹೊರಗುತ್ತಿಗೆ ನೌಕರರನ್ನು ನಿವೃತ್ತಿಯವರೆಗೂ ಮುಂದುವರೆಸಬೇಕು ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಧರಣಿ ನಡೆಸಲಿದ್ದಾರೆ. ಪ್ರತಿಭಟನಾ ಮೆರವಣಿಗೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ನಿತ್ಯಾನಂದಸ್ವಾಮಿ, ಪ್ರಧಾನ ಕಾರ್ಯದರ್ಶಿ ಭೀಮಶೆಟ್ಟಿ ಯಂಪಳ್ಳಿ, ಸಹ ಕಾರ್ಯದರ್ಶಿ ಕೆ.ಹನುಮೇಗೌಡ, ಖಜಾಂಚಿ, ಚಂದ್ರಪ್ಪ ಹೊಸ್ಕೇರಾ, ಮುಖಂಡರಾದ ಪೀರು ರಾಠೋಡ್ ಸೇರದಂತೆ ಸಾವಿರಾರು ಕಾರ್ಮಿಕರು ಇದ್ದರು.
