ಸುಪ್ರೀಂ ಕೋರ್ಟ್ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ

ಸುಪ್ರೀಂ ಕೋರ್ಟ್ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ

ನವದೆಹಲಿ: ಸುಪ್ರೀಂ ಕೋರ್ಟ್ನ ಹೊರಗೆ ಒಬ್ಬ ಪುರುಷ ಮತ್ತು ಮಹಿಳೆ ಇಬ್ಬರೂ ಸೋಮವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆ ನಿರ್ಧಾರದ ಹಿಂದಿನ ಕಾರಣ ತಿಳಿದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಪುರುಷ ಮತ್ತು ಮಹಿಳೆ ಬೆಂಕಿ ಹಚ್ಚಿಕೊಳ್ಳುವ ಮುನ್ನ ತಮ್ಮ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡಿದ್ದಾರೆಂದು ತನಿಖೆಯಿಂದ ತಿಳಿದುಬಂದಿದೆ.

ಕೋರ್ಟ್‍ಬಳಿ ನಿಯೋಜಿಸಲಾಗಿದ್ದ ಪೊಲೀಸ್ ತಂಡ, ಪುರುಷ ಮತ್ತು ಮಹಿಳೆಯನ್ನು ರಕ್ಷಿಸಿ, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಯಿತು ಎಂದು ಉಪ ಪೊಲೀಸ್ ಆಯುಕ್ತ ದೀಪಕ್ ಯಾದವ್ ಹೇಳಿದ್ದಾರೆ.

ಸಂತ್ರಸ್ತರನ್ನು ಚಿಕಿತ್ಸೆಗಾಗಿ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಘಟನೆ ಸಂಬಂಧ ತನಿಖೆ ನಡೆಯುತ್ತಿದೆ.

ಫ್ರೆಶ್ ನ್ಯೂಸ್

Latest Posts

Featured Videos