ಸರ್ಕಾರದಿಂದ ರಾಜ್ಯ ಜನತೆಗೆ ಮತ್ತೊಂದು ಭಾಗ್ಯ

ಸರ್ಕಾರದಿಂದ ರಾಜ್ಯ ಜನತೆಗೆ ಮತ್ತೊಂದು ಭಾಗ್ಯ

ಬೆಂಗಳೂರು, ಸೆ.11:ರಾಜ್ಯದ ಜನತೆಗೆ ಮತ್ತೊಂದು ಮನೆ ಬಾಗಿಲಿಗೆ ಭಾಗ್ಯ. ಸರ್ಕಾರಿ ಯೋಜನೆಗಳು ಇನ್ನೂ ಹತ್ತಿರವಾಗುವುದಕ್ಕೆ ಎಲ್ಲಾ ರೀತಿಯಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಮುಂದಾಗಿದೆ. ಮನೆ ಬಾಗಿಲಿಗೆ ಉಚಿತ ಔಷಧಿ ಹಾಗೂ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಯೋಜನೆಗೆ ಸಂಬಂಧಪಟ್ಟಂತೆ ಸ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆ ಮಾಡಲಾಗಿದೆ. ಈ ಯೋಜನೆ ಜಾರಿ ತರಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದ್ದು, ಕ್ಯಾಬಿನೆಟ್ ಅಲ್ಲಿ ಒಪ್ಪಿಗೆ ಸಿಕ್ಕರೆ ಶೀಘ್ರದಲ್ಲಿ ಜಾರಿಗೆ ಬರಲಿದೆ.

ಹೃದಯ, ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ, ಇಸಿಜಿ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆ ನಡೆಸಿ ಆಯ್ದ ಸಮಸ್ಯೆಗಳಿಗೆ ಅಗತ್ಯವಿರುವಷ್ಟು ಔಷಧಗಳನ್ನು ಸ್ಥಳದಲ್ಲೇ ಉಚಿತವಾಗಿ ನೀಡಲು ಈ ಯೋಜನೆಯಲ್ಲಿ ಉದ್ದೇಶಿಸಲಾಗಿದ್ದು, ಪ್ರತಿಯೊಬ್ಬರ ಮನೆ ಬಾಗಿಲಿಗೆ ಆರೋಗ್ಯ ಸೇವೆ ನೀಡಲು ಗೃಹ ಆರೋಗ್ಯ ಯೋಜನೆ ಜಾರಿಗೆ ಆರೋಗ್ಯ ಇಲಾಖೆ ಮುಂದಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos