ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕಾಡುಪ್ರಾಣಿಗಳು ಕಾಡನ್ನು ಬಿಟ್ಟು ನಾಡಿಗೆ ಬರುತ್ತಿದ್ದಾವೆ. ಕಾಡುಪ್ರಾಣಿಗಳು ಆಹಾರ ಹುಡುಕಿಕೊಂಡು ನಾಡಿಗೆ ಬರುತ್ತಿದ್ದಾವೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತ್ಯಕ್ಷವಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಬೊಮ್ಮನಹಳ್ಳಿಯ ಕೂಡ್ಲು, ಸಿಂಗಸಂದ್ರ ಬಳಿ ನಿನ್ನೆ ಚಿರತೆ ಪ್ರತ್ಯಕ್ಷವಾಗಿದ್ದು ಬೊಮ್ಮನಹಳ್ಳಿ HSR ಲೇಔಟ್ BTM ಲೇಔಟ್ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಜನರು ಒಬ್ಬೊಬ್ಬರೇ ಓಡಾಡದಂತೆ ಅರಣ್ಯ ಇಲಾಖೆ ಸೂಚನೆ ನೀಡಿದೆ. ರಾತ್ರಿ ವೇಳೆ ಒಬ್ಬೊಬ್ಬರೇ ಓಡಾಡಬೇಡಿ ಅನಿವಾರ್ಯವಿದ್ದಲ್ಲಿ ಕಾರಿನಲ್ಲಿ ಓಡಾಡಿ ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ. K.R.ಪುರಂ ಅರಣ್ಯಾಧಿಕಾರಿಗಳು ಚಿರತೆಗಾಗಿ ಸಿಂಗಸಂದ್ರ ಲೇಔಟ್ನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ದಾಮೊದರ್ ರೆಡ್ಡಿ ಎಂಬುವವರ ಮನೆಯ ಬಳಿ ಚಿರತೆ ಕಾಣಿಸಿಕೊಂಡಿದ್ದು, ಬೀದಿ ನಾಯಿಗಳು ಚಿರತೆಯನ್ನು ನೋಡಿ ಅದನ್ನು ಓಡಿಸಿಕೊಂಡು ಹೋಗುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಚಿರತೆ ನೋಡಿದ ನಿವಾಸಿಗಳು ಆತಂಕದಲ್ಲೇ ಮನೆಯಲ್ಲಿ ಅಡಗಿ ಕೂರುವಂತಾಗಿದೆ. ಇದೀಗ ನಿದ್ದೆಗೆಡಿಸಿದ ಚಿರತೆ ಸೆರೆಗಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.