ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ತಿಂಗಳಿಗೆ 5,000 ರೂ. ಮಾಸಾಸನ ಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಇಂದು ನಗರದಲ್ಲಿ ರಾಜ್ಯ ಬಜೆಟ್ ನಲ್ಲಿ ತಿಂಗಳಿಗೆ 5,000 ರೂ. ಮಾಸಾಸನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಇಂದು ಬೆಂಗಳೂರಿನಲ್ಲಿ ವಿಧಾನ ಸೌಧ ಚಲೋ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಮುಖಂಡೆ ಮಾಳಮ್ಮ, ಮುಖಂಡರಾದ, ನಿತ್ಯಾನಂದ ಸ್ವಾಮಿ, ಎಸ್.ವರಲಕ್ಷ್ಮೀ, ಹನುಮೇಗೌಡ ಮತ್ತಿತರರು ಉಪಸ್ಥಿತರಿದ್ದರು.
