ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ನಟಿ ಅದಿತಿ ಪ್ರಭುದೇವ!

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ನಟಿ ಅದಿತಿ ಪ್ರಭುದೇವ!

ಬೆಂಗಳೂರು: ಹೊಸ ವರ್ಷದ ಮೊದಲ ದಿನ ನಟಿ ಅದಿತಿ ಪ್ರಭುದೇವ ಅವರು ಅಮ್ಮನಾಗುತ್ತಿರುವ ಸಂತಸದ ವಿಚಾರವನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ಹೊಸ ವರ್ಷದ ಮೊದಲ ದಿನವೇ ತಮ್ಮ ಅಭಿಮಾನಿಗಳಿಗೆ ಖುಷಿಯ ವಿಚಾರವನ್ನು ಇನ್ಸ್ಟಾಗ್ರಾಂನಲ್ಲಿ ಫೋಟೋ ಹಂಚಿಕೊಂಡು ತಿಳಿಸಿದ್ದಾರೆ.
ಸಂಬಂಧಗಳಲ್ಲಿ ಶ್ರೇಷ್ಠವಾದದ್ದು , ಹುಟ್ಟಿದಾಗಿನಿಂದ ಸಾಯುವವರೆಗೂ ಪ್ರತಿಯೊಂದು ನೋವು ನಲಿವಿನಲ್ಲೂ ನಮ್ಮ ಬಾಯಿಂದ ಬರುವ ಏಕೈಕ ಪದ “ಅಮ್ಮ” ಜೀವನದಲ್ಲಿ ಪ್ರತಿಯೊಬ್ಬರೂ ಪ್ರೀತಿಯಿಂದ ಗೌರವದಿಂದ ಕಾಣುವ ಸಂಬಂಧ “ಅಮ್ಮ” ಪ್ರತಿಕ್ಷಣ ನಮಗಾಗಿ ಮಿಡಿಯುವ ಜೀವ “ಅಮ್ಮ” 2024 ಕ್ಕೆ ನಾನು ” ಅಮ್ಮ” ಎಂದು ಬರೆದುಕೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos