ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಅಗ್ನಿ ಅವಘಡಗಳ ಸಂಖ್ಯೆ ಹೆಚ್ಚಾಗುತ್ತಾ ಇದೆ ಅದೇ ತರ ನಿನ್ನೆ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ.
ನಗರದ ಬಳೆಪೇಟೆಯ ಪೇಯಿಂಟ್ ಶಾಪ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಎರಡು ಅಂತಸ್ಥಿನ ಕಟ್ಟದ ಹೊತ್ತಿ ಉರಿದಿದೆ. ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಅಂಗಡಿ ಕಳೆದುಕೊಂಡ ಕುಟುಂಬ ಕಣ್ಣೀರಿಟ್ಟಿದೆ. ಬರೋಬ್ಬರಿ 30 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.
ಕೆಲ ಕ್ಷಣಗಳಲ್ಲೇ ಎರಡು ಅಂತಸ್ಥಿಗೆ ವ್ಯಾಪಿಸಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಮಾಲೀಕ ಕೃಷ್ಣಮೂರ್ತಿ ಕುಟುಂಬ, ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. 20 ವರ್ಷಗಳಷ್ಟು ಹಳೆಯ ಬಿಲ್ಡಿಂಗ್ನಲ್ಲಿ ಇದೇ ಮೊದಲಬಾರಿಗೆ ಅಗ್ನಿ ಅನಾಹುತ ಸಂಭವಿಸಿದೆ ಎಂದು ಸಹ ಕೃಷ್ಣಮೂರ್ತಿ ತಿಳಿಸಿದ್ದಾರೆ.