190 ಅಂಕದ ಬೃಹತ್‌ ಮುನ್ನಡೆ ಸಾಧಿಸಿದ ಭಾರತ

190 ಅಂಕದ ಬೃಹತ್‌ ಮುನ್ನಡೆ ಸಾಧಿಸಿದ ಭಾರತ

ಬೆಂಗಳೂರು: ಟೀಂ ಇಂಡಿಯಾ ಆಟಗಾರರು ಇಂಗ್ಲೆಂಡ್ ತಂಡಗಳ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈ ಮೂಲಕ190 ರನ್‍ಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅಲ್ಲದೇ ಮೂರನೇ ದಿನವೂ ಟೀಂ ಇಂಡಿಯಾ ಬ್ಯಾಟಿಂಗ್ ಮುಂದುವರಿಸಲಿದೆ.

ಹೈದರಾಬಾದ್​​ನ ರಾಜೀವ್​ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್  ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 436 ರನ್​ಗಳಿಸಿ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ತಂಡವು ಉತ್ತಮ ಪಡೆದಿರಲಿಲ್ಲ. ಬಾಝ್​ಬಾಲ್ ತಂತ್ರದೊಂದಿಗೆ ಇನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್ ತಂಡಕ್ಕೆ ಟೀಮ್ ಇಂಡಿಯಾದ ಸ್ಪಿನ್ನರ್​ಗಳು ಆಘಾತದ ಮೇಲೆ ಆಘಾತ ನೀಡಿದ್ದರು. ಪರಿಣಾಮ 125 ರನ್​ಗಳಿಸುವಷ್ಟರಲ್ಲಿ ಇಂಗ್ಲೆಂಡ್ ತಂಡವು 5 ವಿಕೆಟ್ ಕಳೆದುಕೊಂಡಿತು.

ಈ ಹಂತದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ 88 ಎಸೆತಗಳಲ್ಲಿ 70 ರನ್ ಬಾರಿಸಿದ್ದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಸಾಥ್ ಸಿಕ್ಕಿರಲಿಲ್ಲ. ಅಂತಿಮವಾಗಿ ಇಂಗ್ಲೆಂಡ್ ತಂಡವು 246 ರನ್​ಗಳಿಗೆ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ತಲಾ 3 ವಿಕೆಟ್ ಪಡೆದರೆ, ಜಸ್​ಪ್ರೀತ್ ಬುಮ್ರಾ ಹಾಗೂ ಅಕ್ಷರ್ ಪಟೇಲ್ ತಲಾ 2 ವಿಕೆಟ್ ಕಬಳಿಸಿದರು.

ಇಂಗ್ಲೆಂಡ್​ ತಂಡದ ಮೊದಲ ಇನಿಂಗ್ಸ್​ ಮುಕ್ತಾಯದ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ಆರಂಭಿಕ ಆಟಗಾರ ರೋಹಿತ್ ಶರ್ಮಾ (24) ಬೇಗನೆ ಔಟಾದರೂ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ಟೀಮ್ ಇಂಡಿಯಾಗೆ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಜೈಸ್ವಾಲ್ 74 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 80 ರನ್ ಬಾರಿಸಿದ್ದರು.

ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭ್​ಮನ್ ಗಿಲ್ (23) ಬೇಗನೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ಜವಾಬ್ದಾರಿಯುತ ಇನಿಂಗ್ಸ್ ಆಡಿದರು. ಶ್ರೇಯಸ್ ಅಯ್ಯರ್ (35) ಜೊತೆಗೂಡಿ ಇನಿಂಗ್ಸ್ ಕಟ್ಟಿದ ರಾಹುಲ್ 123 ಎಸೆತಗಳಲ್ಲಿ 86 ರನ್ ಬಾರಿಸಿ ಶತಕ ವಂಚಿತರಾದರು.

ರವೀಂದ್ರ ಜಡೇಜಾ ಆಕರ್ಷಕ ಅರ್ಧಶತಕ ಬಾರಿಸಿದರು. ಆದರೆ ಮೂರನೇ ದಿನದಾಟದ ಆರಂಭದಲ್ಲೇ ಜಡೇಜಾ (87)  ಜೋ ರೂಟ್​ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆದರು. ಇದರೊಂದಿಗೆ ಜಡ್ಡು ಕೂಡ ಶತಕ ವಂಚಿತರಾಗಿ ಪೆವಿಲಿಯನ್​ಗೆ ಹಿಂತಿರುಗಿದರು.

ಮೊದಲ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ 246 ರನ್​ಗಳಿಗೆ ಆಲೌಟ್ ಆಗಿದ್ದರೆ, ಟೀಮ್ ಇಂಡಿಯಾ 436 ರನ್​ ಬಾರಿಸಿದೆ. ಈ ಮೂಲಕ ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 190 ರನ್​ಗಳ ಬೃಹತ್ ಮುನ್ನಡೆ ಸಾಧಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos