ವಿಶ್ವ ದಾಖಲೆ ಬರೆದ ಜೋ ರೂಟ್!

ವಿಶ್ವ ದಾಖಲೆ ಬರೆದ ಜೋ ರೂಟ್!

ಬೆಂಗಳೂರು: ಹೈದರಾಬಾದ್​ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ಜೋ ರೂಟ್  ಹೊಸ ವಿಶ್ವ ದಾಖಲೆ ಬರೆದಿದ್ದಾರೆ.

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ರೂಟ್ ಆರು ಎಸೆತಗಳಲ್ಲಿ 2 ರನ್ ಗಳಿಸಿ ಔಟಾದರೂ ಕೂಡ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದರು. ಭಾರತ ವಿರುದ್ಧ ಟೆಸ್ಟ್​ನಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರ ಎನಿಸಿಕೊಂಡರು. ರೂಟ್​ ಭಾರತ ಎದುರು 26 ಟೆಸ್ಟ್‌ ಪಂದ್ಯಗಳನ್ನಾಡಿ 9 ಶತಕ ಮತ್ತು 10 ಅರ್ಧ ಶತಕ ಬಾರಿಸಿದ್ದಾರೆ.

ಇಂಗ್ಲೆಂಡ್ ತಂಡದ ಸ್ಟಾರ್​ ಬ್ಯಾಟರ್​ ಜೋ ರೂಟ್ ಅವರು ಆಸ್ಟ್ರೇಲಿಯಾದ ದಂತಕಥೆ ರಿಕಿ ಪಾಂಟಿಂಗ್ ಅವರನ್ನು ಹಿಂದಿಕ್ಕಿ ಟೆಸ್ಟ್ ಪಂದ್ಯಗಳಲ್ಲಿ ಭಾರತದ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಇತಿಹಾಸವನ್ನು ಬರೆದಿದ್ದಾರೆ. ರೂಟ್ ಅವರು ಇಂಗ್ಲೆಂಡ್ ಮತ್ತು ಭಾರತದ ನಡುವೆ ಒಟ್ಟು 2557* ಟೆಸ್ಟ್ ರನ್ ಗಳಿಸಿದ್ದಾರೆ. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್ ಅವರ ದಾಖಲೆಯೊಂದನ್ನು ಕೂಡ ರೂಟ್​ ಮುರಿದಿದ್ದರು.

 

 

 

 

ಫ್ರೆಶ್ ನ್ಯೂಸ್

Latest Posts

Featured Videos