ಬೆಂಗಳೂರು: ಬಿಡಿಎ ನೂತನ ಅಧ್ಯಕ್ಷರಾಗಿ ಶಾಂತಿನಗರ ಶಾಸಕ ಎನ್.ಎ ಹ್ಯಾರಿಸ್ ನೇಮಕಗೊಂಡಿದ್ದಾರೆ. ನಿಗಮ ಮಂಡಳಿ ಅಧ್ಯಕ್ಷರ ಮೊದಲ ಪಟ್ಟಿಯಲ್ಲಿ ಹ್ಯಾರೀಸ್ ಆಯ್ಕೆ ಆದರು. ಬಿಡಿಎ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಶಾಸಕ ಎನ್.ಎ. ಹ್ಯಾರಿಸ್ ಬಿಡಿಎ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.