ಬೆಂಗಳೂರು: ಇಂಗ್ಲೆಂಡ್ ವಿರುದ್ದ ಭಾರತ ನಡುವಿನ 5 ಟೆಸ್ಟ್ ಪಂದ್ಯಗಳಲ್ಲಿ ಈಗಾಗಲೇ 3 ಪಂದ್ಯಗಳು ಮುಗಿದಿದ್ದು. ಈ ಟೆಸ್ಟ್ ಪಂದ್ಯದಲ್ಲಿ ಹೊಸಬ್ಬರೀಗೆ ಹೆಚ್ಚು ಅವಕಾಶ ನೀಡಿದ್ದು. ನಿರಂಜನ್ ಶಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 3ನೇ ಟೆಸ್ಟ್ನಲ್ಲಿ ಯಶಸ್ವಿ ಡಬಲ್ ಸೆಂಚುರಿ ಸಿಡಿಸುವ ಮೂಲಕ
ಅಪರೂಪದ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ಬಹು ಅಪರೂಪದ ರೆಕಾರ್ಡ್ ಅನ್ನು ಸರಿಗಟ್ಟುವ ಮೂಲಕ ಎಂಬುದೇ ವಿಶೇಷ.
ಈ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಯಶಸ್ವಿ ಜೈಸ್ವಾಲ್ 236 ಎಸೆತಗಳಲ್ಲಿ 12 ಭರ್ಜರಿ ಸಿಕ್ಸ್ ಹಾಗೂ 14 ಫೋರ್ಗಳೊಂದಿಗೆ ಅಜೇಯ 214 ರನ್ ಬಾರಿಸಿದರು. ಇದರೊಂದಿಗೆ ಟೆಸ್ಟ್ ಸರಣಿಯೊಂದರಲ್ಲಿ ಟೀಮ್ ಇಂಡಿಯಾ ಪರ ಬ್ಯಾಕ್ ಟು ಬ್ಯಾಕ್ ಡಬಲ್ ಸೆಂಚುರಿ ಬಾರಿಸಿದ 2ನೇ ಬ್ಯಾಟರ್ ಎನಿಸಿಕೊಂಡರು. ಈ ಮೂಲಕ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟಿದರು.
ಕಿಂಗ್ ಕೊಹ್ಲಿ 2017 ರಲ್ಲಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಡಬಲ್ ಸೆಂಚುರಿ ಬಾರಿಸಿ ಈ ಡಬಲ್ ಟನ್ಗಳ ವಿಶೇಷ ದಾಖಲೆ ಬರೆದಿದ್ದರು. ಇದೀಗ ಏಳು ವರ್ಷಗಳ ಬಳಿಕ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ.
3ನೇ ಟೆಸ್ಟ್ ಪಂದ್ಯದಲ್ಲಿ 214 ರನ್ ಬಾರಿಸುವ ಮೂಲಕ ಒಂದೇ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಡಬಲ್ ಸೆಂಚುರಿ ಸಿಡಿಸಿದ ವಿರಾಟ್ ಕೊಹ್ಲಿಯ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ. ಅದರಲ್ಲೂ ಈ ಸಾಧನೆ ಮಾಡಿದ ಮೊದಲ ಎಡಗೈ ದಾಂಡಿಗ ಎಂಬ ಹೆಗ್ಗಳಿಕೆಗೂ ಯಶಸ್ವಿ ಜೈಸ್ವಾಲ್ ಪಾತ್ರರಾಗಿದ್ದಾರೆ.