ಸರ್ಕಾರದ ವಿರುದ್ದ ಕುಮಾರಸ್ವಾಮಿ ಗರಂ

ಸರ್ಕಾರದ ವಿರುದ್ದ ಕುಮಾರಸ್ವಾಮಿ ಗರಂ

ಬೆಂಗಳೂರು: ಕಾಡಾನೆ ದಾಳಿಗೆ ಬಲಿಯಾಗಿದ್ದ ಕೇರಳ ವ್ಯಕ್ತಿ ಕುಟುಂಬಕ್ಕೆ 15 ಲಕ್ಷ ರೂ. ಕೊಟ್ಟಿದ್ದೀರಿ, ಇಲ್ಲಿ ಆನೆ ತುಳಿತಕ್ಕೆ ಸತ್ತರೆ 5 ಲಕ್ಷ ರೂಪಾಯಿ ಕೊಡುತ್ತೀರಿ. ಆದರೆ ರೈತರು ಪರಿಹಾರ ಕೇಳಿದರೆ ಕೊಡಲ್ಲ. ನನ್ನ ತೆರಿಗೆ ನನ್ನ ಹಕ್ಕು ಅನ್ನುವ ಬದಲು ನನ್ನ ತೆರಿಗೆ ಕಾಂಗ್ರೆಸ್​ಗೆ ಅಂತ ಬದಲು ಮಾಡಿಕೊಳ್ಳಿ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.

ಕೇರಳದಲ್ಲಿ ಆನೆ ದಾಳಿಗೆ ಬಲಿಯಾದ ವ್ಯಕ್ತಿಗೆ ಕರ್ನಾಟಕ ಸರ್ಕಾರದಿಂದ ಪರಿಹಾರ ನೀಡುವ ವಿಚಾರ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸರ್ಕಾರದ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

ಮಹಾನುಭಾವರು ಕೇರಳದ ಮೃತ ವ್ಯಕ್ತಿಗೆ 15 ಲಕ್ಷ ರೂಪಾಯಿ ಪರಿಹಾರ ಕೊಟ್ಟಿದ್ದಾರೆ. ಅದೇ ಇಲ್ಲಿ ಏನಾದರೂ ಆನೆ ತುಳಿದು ವ್ಯಕ್ತಿ ಮೃತಪಟ್ಟರೆ ಕೇವಲ 5 ಲಕ್ಷ ಕೊಡ್ತೀರಿ. ಅದಕ್ಕೂ ಕಚೇರಿಗೆ ಅಲೆಯಬೇಕು ಎಂದು ಕಿಡಿಕಾರಿದ್ದಾರೆ.

ವಯನಾಡಿನ ಸಂಸದರು ಹೇಳಿದರು ಅಂತ ಸಿದ್ದರಾಮಯ್ಯನನವರು ನಮ್ಮ ತೆರಿಗೆ ನಮ್ಮ ಹಕ್ಕಿನ 15 ಲಕ್ಷ ರೂ. ಕೊಟ್ಟಿದ್ದಾರೆ. ನಮ್ಮ ತೆರಿಗೆಯಲ್ಲಿ ತೆಲಂಗಾಣದಲ್ಲಿ ಜಾಹೀರಾತು ಕೊಟ್ಟಿದ್ದರು. ನಮ್ಮ ತೆರಿಗೆ ನಮ್ಮ ಹಕ್ಕು ಅಂತ ದೆಹಲಿಗೆ ಹೋದವರು ಇಲ್ಲಿ ಈ ರೀತಿ ನಮ್ಮ ತೆರಿಗೆ ಹಣ ಖರ್ಚು ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೆಚ್‍ಡಿಕೆ ಗರಂ ಆದರು.

ಫ್ರೆಶ್ ನ್ಯೂಸ್

Latest Posts

Featured Videos