ಮೈತ್ರಿ ಅಭ್ಯರ್ಥಿ ವಿರುದ್ಧ ಕಾಂಗ್ರೆಸ್ ನ ಪುಟ್ಟಣ್ಣ ಭರ್ಜರಿ ಗೆಲುವು

ಮೈತ್ರಿ ಅಭ್ಯರ್ಥಿ ವಿರುದ್ಧ ಕಾಂಗ್ರೆಸ್ ನ ಪುಟ್ಟಣ್ಣ ಭರ್ಜರಿ ಗೆಲುವು

ಬೆಂಗಳೂರು: ವಿಧಾನ ಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ. ಇದು ಇವರ ಸತತ ಐದನೇ ಗೆಲುವು. ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿರುದ್ಧ ಕಾಂಗ್ರೆಸ್ ನ ಪುಟ್ಟಣ್ಣ 1506 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಆರಂಭದಿಂದಲೂ ಮುನ್ನಡೆ ಕಾಯ್ದುಗೊಂಡಿದ್ದ ಪುಟ್ಟಣ್ಣ ಅಂತಿಮವಾಗಿ ಎ.ಪಿ.ರಂಗನಾಥ್ ವಿರುದ್ಧ ಗೆಲುವು ಸಾಧಿಸಿದ್ದಾರೆ. ಪುಟ್ಟಣ್ಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ಕಳೆದ ಮಾರ್ಚ್ ನಲ್ಲಿ ಬಿಜೆಪಿಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿದ್ದು ಇದೀಗ ಪುಟ್ಟಣ್ಣ ಅವರೇ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್​ನ ಪುಟ್ಟಣ್ಣ ಒಟ್ಟು 8,260 ಮತಗಳನ್ನು ಪಡೆದುಕೊಂಡಿದ್ದರೆ, ಜೆಡಿಎಸ್​-ಬಿಜೆಪಿ ಮೈತ್ರಿ ಅಭ್ಯರ್ಥಿ ಎಪಿ ರಂಗನಾಥ್ ಅವರಿಗೆ ಒಟ್ಟು 6753 ಮತಗಳು ಬಿದ್ದಿವೆ. ಇನ್ನು 1239 ಮತಗಳು ತಿರಸ್ಕೃತಗೊಂಡಿವೆ.

 

ಫ್ರೆಶ್ ನ್ಯೂಸ್

Latest Posts

Featured Videos