ಉಪ ಮುಖ್ಯಮಂತ್ರಿ ನಿವಾಸದಲ್ಲಿ ಔತಣಕೂಟ

ಉಪ ಮುಖ್ಯಮಂತ್ರಿ ನಿವಾಸದಲ್ಲಿ ಔತಣಕೂಟ

ಬೆಂಗಳೂರು: ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಸಚಿವರ ಔತಣಕೂಟ ಆಯೋಜಿಸಿದ್ದಾರೆ. ಈ ಔತಣಕೂಟದಲ್ಲಿ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದಲ್ಲಾ ಅವರು ಭಾಗಿಯಾಗಿರುವುದು ಕುತೂಹಲ ಮೂಡಿಸಿದೆ. ಇವರಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಭಾಗಿಯಾಗಿದ್ದಾರೆ. ಅಲ್ಲದೆ, ಸಿದ್ದರಾಮಯ್ಯ ಮತ್ತು ಫಾರೂಕ್ ಅಬ್ದುಲ್ಲಾ ಅವರು ಭೇಟಿಯಾಗಿ ಪರಸ್ಪರ ಕುಶಲೋಪರಿ ವಿಚಾರಿಸಿದರು.

ಸಿಎಂ ಸಿದ್ದರಾಮಯ್ಯ, ಸಚಿವರಾದ ಎನ್.ಚಲುವರಾಯಸ್ವಾಮಿ, ಡಾ .ಶರಣ ಪ್ರಕಾಶ್, ಎಂಸಿ ಸುಧಾಕರ್, ಜಮೀರ್ ಅಹ್ಮದ್ ಖಾನ್, ಪ್ರಿಯಾಂಕ್ ಖರ್ಗೆ, ಕೆ ಜೆ ಜಾರ್ಜ್, ಕೆ.ವೆಂಕಟೇಶ್, ಜಿ.ಜಿ ಪರಮೇಶ್ವರ್, ಎಂ ಬಿ ಪಾಟೀಲ್, ಮಧು ಬಂಗಾರಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಈಶ್ವರ್ ಖಂಡ್ರೆ, ಆರ್ ಬಿ ತಿಮ್ಮಾಪುರ, ಬೋಸರಾಜ್, ಹೆಚ್ ಕೆ ಪಾಟೀಲ್, ಶಿವಾನಂದ್ ಪಾಟೀಲ್, ರಾಮಲಿಂಗ ರೆಡ್ಡಿ, ಶಿವರಾಜ್ ತಂಗಡಗಿ, ಬಿ.ನಾಗೇಂದ್ರ ಅವರು ಔತಣಕೂಟದಲ್ಲಿ ಭಾಗಿಯಾಗಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos