ಬೆಂಗಳೂರು: ರಾಜ್ಯಸಭಾ ಚುನಾವಣೆ ನಡೆದು ಕಾಂಗ್ರೆಸ್ನ ಮೂವರು ರಾಜ್ಯಸಭೆಯ ನೂತನ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನಲೆ ನಿನ್ನೆ ಕಾಂಗ್ರೆಸ್ನ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದರು. ಈ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಇದನ್ನು ಖಂಡಿಸಿ ಇಂದು ವಿಧಾನಸಭೆ ಕಲಾಪದಲ್ಲಿ ವಿಪಕ್ಷ ಬಿಜೆಪಿ ಧರಣಿ ನಡೆಸಿದೆ.
ವಿಧಾನಸಭೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಕಲಾಪ ಪುನರಾರಂಭವಾದಾಗಲು ಬಿಜೆಪಿ ಸದಸ್ಯರು ಗದ್ದಲ ಕೋಲಾಹಲದಿಂದ ಮುಂದುವರೆಸಿದರು.
ವಿಧಾನಸಭೆ ಕಲಾಪ ಪ್ರಾರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಮತ್ತೆ ಪ್ರತಿಭಟನೆ ಮುಂದುವರೆಸುತ್ತಾರೆ. ಸದನದ ಬಾವಿಗಿಳಿದು ಸ್ಪೀಕರ್ ಪೀಠದ ಎದುರು ಕಾಗದಗಳನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದರು.
ಸದನದಲ್ಲಿ ಗದ್ದಲ ತೀವ್ರಗೊಳ್ಳುತ್ತಿದ್ದಂತೆ ಸ್ಪೀಕರ್ ಯುಟಿ ಖಾದರ್ ಕಲಾಪವನ್ನು ನಾಳೆ ಬೆಳಿಗ್ಗೆ 9:00ಗೆ ಮುಂದೂಡಿದರು ಈ ಮೂಲಕ ವಿಧಾನಸಭಾ ಕಲಾಪ ಮತ್ತೊಂದು ದಿನಕ್ಕೆ ವಿಸ್ತರಣೆಯಾಗಿದೆ ಎಂದು ಹೇಳಿದ್ದರು.