ಪಾಕ್‌ ಪರ ಘೋಷಣೆ ಕೊನೆಗೂ 3 ಅರೋಪಿ ಬಂಧನ

ಪಾಕ್‌ ಪರ ಘೋಷಣೆ ಕೊನೆಗೂ 3 ಅರೋಪಿ ಬಂಧನ

ಬೆಂಗಳೂರು: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೇಸ್ ಗೆ ಸಂಬಂಧಿಸಿದಂತೆ ಕೊನೆಗೂ ಮೂವರನ್ನು ಅರೆಸ್ಟ್ ಮಾಡಲಾಗಿದೆ. ವಿಧಾನಸೌಧದ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ವಿಧಾನಸೌಧ ಠಾಣಾ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ದೆಹಲಿ ಮೂಲದ ಇಲ್ತಾಜ್, ಆರ್ ಟಿನಗರದ ಮುನಾವರ್, ಬ್ಯಾಡಗಿಯ ಮೊಹಮ್ಮದ್  ಶಫಿ ನಾಶಿಪುಡಿ ಬಂಧಿತರು ಎನ್ನಲಾಗಿದೆ. 2ನೇ ಎಫ್ ಎಸ್ ಎಲ್ ವರದಿ ಆಧರಿಸಿ ಮೂವರನ್ನ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಗೆಲುವು ಸಾಧಿಸಿದ ಬಳಿಕ ಸಂಭ್ರಮಾಚರಣೆ ವೇಳೆ ಪಾಕ್ ಪರ ಘೋಷಣೆ ಕೂಗಿದ ಆರೋಪ ಕೇಳಿ ಬಂದಿತ್ತು. ಸದ್ಯ ಈ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ಬಳಿಕ ನ್ಯಾಯಾಲಕ್ಕೆ ಹಾಜರುಪಡಿಸಲಿದ್ದಾರೆ

ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ್ದರು. ಗೆದ್ದ ಖುಷಿಯಲ್ಲಿ ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಕೂಗಿದ ಆರೋಪ ರಾಜಕೀಯದಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿತ್ತು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಫ್ರೆಶ್ ನ್ಯೂಸ್

Latest Posts

Featured Videos