ಕಲಬುರಗಿ: ಸಿಲಿಕಾನ್ ಸಿಟಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ನಿಂದ ಇಡೀ ರಾಜ್ಯವೇ ಬೆಚ್ಚಿಬಿದ್ದಿತ್ತು. ಇದೇ ಬೆನ್ನಲ್ಲೇ ಮತ್ತೊಂದು ಬಾಂಬ್ ಬೆದರಿಕೆ ಬಂದಿದ್ದು ಇಡೀ ರಾಜ್ಯದೆಲ್ಲೆಡೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಇದರ ಬೆನ್ನಲ್ಲೇ ಕಲಬುರಗಿ ಬಸ್ ನಿಲ್ದಾಣದಲ್ಲಿ ಅನುಮಾನಸ್ಪದವಾದ ಬ್ಯಾಗ್ ಪತ್ತೆಯಾಗಿದ್ದು ಕೆಲಕಾಲ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿತ್ತು, ಕೂಡಲೆ ಸಾರ್ವಜನಿಕರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಬಾಂಬ್ ಸ್ಕ್ಟಾಡ್ ತಂಡ ಪರಿಶೀಲನೆ ನಡೆಸಿ ತಪಾಸನೆ ವೇಳೆ ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಿಲ್ಲ ಈ ಹಿನ್ನೆಲೆ ಸಾರ್ವಜನಿಕರು ನಿಟ್ಟಿಸಿರು ಬಿಟ್ಟಿದ್ದಾರೆ.