ಏತ ನೀರಾವರಿ ಯೋಜನೆ ಉದ್ಘಾಟಿಸಿದ ಸಿಎಂ!

ಏತ ನೀರಾವರಿ ಯೋಜನೆ ಉದ್ಘಾಟಿಸಿದ ಸಿಎಂ!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಟ್ಟಲಗಿಯ ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಿ ಜಲಜೀವನ್ ಮಿಷನ್ ಯೋಜನೆ ಜಾರಿ ನೀಡಿ ಜೊತೆಗೆ ಸಿಂಧೂ ನಗರ್ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನೆರವೇರಿಸಿದರು.

ಶಾಸಕರಾದ ಲಕ್ಷ್ಮಣ್ ಎಂ‌ ಸವದಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಹಾಗೂ ಬೃಹತ್ ನೀರಾವರಿ ಸಚಿವರಾದ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಬ ಹಟ್ಟಿಹೊಳಿ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ಶಾಸಕರಾದ ಮಹೇಂದ್ರ ತಮ್ಮಣ್ಣವರ, ಅಶೋಕ ಪಟ್ಟಣ ಸೇರಿ ಹಲವು ನಾಯಕರು ವೇದಿಕೆಯಲ್ಲಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos