ಬಿಜೆಪಿಯರಿಗೆ ನಾನು ಮನೆದೇವ್ರು: ಸಚಿವ ಪ್ರಿಯಾಂಕ್ ಖರ್ಗೆ!

ಬಿಜೆಪಿಯರಿಗೆ ನಾನು ಮನೆದೇವ್ರು: ಸಚಿವ ಪ್ರಿಯಾಂಕ್ ಖರ್ಗೆ!

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆನಿನ್ನೆ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನನ್ನ ಹೆಸರು ಹಿಡಿದು ಸಲ್ಲದ ಆರೋಪ ಮಾಡುತ್ತಿರುತ್ತಾರೆ ಎಂದು ಹೇಳಿದರು.ವಿಪಕ್ಷ ನಾಯಕ ಆರ್ ಅಶೋಕ್, ಪಕ್ಷದ ಅಧ್ಯಕ್ಷ ವಿಜಯೇಂದ್ರರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರಿಗೆ ನಾನು ಮನೆ ದೇವರು ಇದ್ದಹಾಗೆ. ಬೆಳಗ್ಗೆಯಿಂದ ರಾತ್ರಿಯವರೆಗೂ ನನ್ನನ್ನು ನೆನಪಿಸಿಕೊಳ್ಳುತ್ತಿರುತ್ತಾರೆ. ನನ್ನ ನಾಮಜಪ ಮಾಡುತ್ತಿರುತ್ತಾರೆ. ಇಲ್ಲದಿದ್ದರೆ ಅವರಿಗೆ ಆಹಾರ ಜೀರ್ಣವಾಗುವುದಿಲ್ಲ, ನಿದ್ರೆನೇ ಹತ್ತೋದಿಲ್ಲವೆಂದು ಹೇಳಿದರು.

ಸಂವಿಧಾನ ಬದಲಿಸುವ ಬಗ್ಗೆ ಮಾತನಾಡಿರುವ ಸಂಸದ ಅನಂತಕುಮಾರ ಅವರಿಗೆ ತಲೆ ಕೆಟ್ಟಿದೆ, ಮಾನಸಿಕ‌ ಸಮತೋಲನ ಕಳೆದುಕೊಂಡಿದ್ದಾರೆಂದರು. ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೇಟ್ ಸಿಗೋದು ಅನುಮಾನವೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ, ಬಿಜೆಪಿಯಲ್ಲಿ ಯಾರಿಗೆ ಟಿಕೇಟ್ ನೀಡುತ್ತಾರೆ, ನಿರಾಕರಿಸುತ್ತಾರೆಂಬುದು ತಮಗೆ ಸಂಬಂಧವೇ ಇಲ್ಲವೆಂದರು.

 

ಫ್ರೆಶ್ ನ್ಯೂಸ್

Latest Posts

Featured Videos