ಮಂಡ್ಯ: ಈ ಬಾರಿ ಲೋಕಸಭಾ ಚುನಾವಣೆ ರಾಜ್ಯದಲ್ಲಡೆ ರಂಗೇರಿದ್ದು ಎಲ್ಲಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಇದು ನಾಮಪತ್ರ ಸಲ್ಲಿಕೆಗೆ ಕೊನೆ ದಿನಾಂಕವಾಗಿರುವುದರಿಂದ ಎಲ್ಲಾ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸುತ್ತಿದ್ದಾರೆ.
ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಆಗಿರುವ ಹೆಚ್‍ಡಿ ಕುಮಾರಸ್ವಾಮಿ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಅದಕ್ಕೂ ಮುನ್ನ ಮಂಡ್ಯದ ಗುತ್ತಲು ಬಳಿಯ ಆರ್ಕೇಶ್ವರ ಸ್ವಾಮಿ ದೇವಸ್ಥಾನಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಅರ್ಕೆಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಕುಮಾರಸ್ವಾಮಿ ನಾಮಪತ್ರವನ್ನು ಇಟ್ಟು ಪೂಜೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಿವಾರ್ಯವಾಗಿ ನಾನು ಸ್ಪರ್ಧೆ ಮಾಡುತ್ತಿದ್ದೇನೆ. ರಾಜ್ಯದಲ್ಲಿ ಮೈತ್ರಿ ಸಂಬಂಧ ಬೆಳೆದ ನಂತರ ಆತಂಕಗೊಂಡಿದ್ದಾರೆ.ಮೈತ್ರಿಯಿಂದ ಕಾಂಗ್ರೆಸ್ ನಾಯಕರಿಗೆ ಆತಂಕ ಶುರುವಾಗಿದೆ. ವೈಯಕ್ತಿಕವಾಗಿ ನನ್ನ ಮೇಲೆ ಟೀಕೆಯನ್ನು ಮಾಡಿದ್ದಾರೆ ಅವರಿಂದ ನಾನು ಸರ್ಟಿಫಿಕೇಟ್ ಪಡೆಯಬೇಕಿಲ್ಲ ಎಂದು ವಾಗ್ದಾಳಿ ನಡೆಸಿದರು.