ಸುಮಲತಾ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿ ವೈ ವಿಜಯೇಂದ್ರ

ಸುಮಲತಾ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿ ವೈ ವಿಜಯೇಂದ್ರ

ಮಂಡ್ಯ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರ ಕಳೆದ ಬಾರಿಯಂತೆ ಈ ಬಾರಿಯೂ ಅತಿ ಹೆಚ್ಚು ಕುತೂಹಲಕಾರಿ ಕಾರಣವಾಗಿತ್ತು. ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಸ್ಪರ್ಧಿಸುತ್ತಿದ್ದಾರೆ. ಮಂಡ್ಯ ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಅವರು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿ ನಾನು ಸ್ವತಂತ್ರವಾಗಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅದಲ್ಲದೇ ಬಿಜೆಪಿ ಸೇರುವುದಾಗಿ ಮಂಡ್ಯ ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಅವರು ಅಚ್ಚರಿ ಘೋಷಣೆ ಮಾಡಿದ್ದು, ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆಗೆ ವಿಜಯೇಂದ್ರ ಅವರು ಮಾತನಾಡಿ, ಸುಮಲತಾ ಅವರು ಪ್ರಧಾನಿ, ಅಮಿತ್ ಶಾ, ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ್ದರು. ರಾಜಕೀಯ ಪರಿಸ್ಥಿತಿಯನ್ನು ಚರ್ಚಿಸಿದ್ದಾರೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟು ಕೊಟ್ಟಿದ್ದು, ಎಚ್.ಡಿ.ಕುಮಾರಸ್ವಾಮಿ ಅವರು ಅಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಈ ನಡುವೆ ಸುಮಲತಾ ಅವರ ತೀರ್ಮಾನ ಸ್ವಾಗತಾರ್ಹ ಎಂದು ತಿಳಿಸಿದರು.

ಹಿರಿಯರು ಮತ್ತು ವಿಧಾನಪರಿಷತ್ ಸದಸ್ಯರೂ ಆದ ವಿಶ್ವನಾಥ್ ಅವರ ಮನೆಗೆ ಭೇಟಿ ಕೊಟ್ಟಿದ್ದೇನೆ. ಮೈಸೂರು- ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ರಾಜವಂಶಸ್ಥರಾದ ಯದುವೀರ ಒಡೆಯರ್ ಅವರು ಸಹ ಇದ್ದರು. ಯದುವೀರ ಒಡೆಯರ್ ಅವರಿಗೆ ಎಲ್ಲರೂ ಪಕ್ಷಾತೀತವಾಗಿ ಬೆಂಬಲ ಕೊಡಬೇಕೆಂದು ಹೇಳಿದ್ದಾರೆ ಎಂದರು. ಯದುವೀರ ಒಡೆಯರ್ ಅವರು ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

 

 

ಫ್ರೆಶ್ ನ್ಯೂಸ್

Latest Posts

Featured Videos