ಹುಬ್ಬಳ್ಳಿ: ಚನ್ನಪಟ್ಟಣದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಬಿಜೆಪಿ ಮತ್ತು ಜೆಡಿಎಸ್ ನಡುವೆ ಚನ್ನಪಟ್ಟಣ ಟಿಕೆಟ್ ಗಾಗಿ ಬಿಗ್ ಫೈಟ್ ನಡೆದಿದ್ದು, ಈ ಮಧ್ಯೆ ಕೇಂದ್ರ ಸಚಿವರಾಗಿರುವಂತಹ ಪ್ರಹ್ಲಾದ್ ಜೋಶಿ ಅವರು ಬಿಗ್ ಅಪ್ಡೇಟ್ ಒಂದನ್ನು ನೀಡಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈವರೆಗೂ ಬಿಜೆಪಿ ಆಗಲಿ ಅಥವಾ ಜೆಡಿಎಸ್ ಆಗಲಿ ಎರಡು ಪಕ್ಷಗಳಲ್ಲಿ ಯಾವುದೇ ಅಭ್ಯರ್ಥಿಗಳ ಹೆಸರು ಅಂತಿಮವಾಗಿಲ್ಲ ಹಾಗಾಗಿ ಎರಡು ಮೂರು ದಿನಗಳಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಹೆಚ್.ಡಿ.ಕೆ, ನಿರಾಣಿ ವಿರುದ್ಧವೂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ
ಇನ್ನು ಭಾರತ ಸರ್ಕಾರ ಉದ್ದು ಮತ್ತು ಸೋಯಾಬಿನ್ ಖರೀದಿ ಮಾಡಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ. ಕೇಂದ್ರ ಸರ್ಕಾರ ಯಾವುದು ಪಕ್ಷಯಿದೆ ಎಂಬುದನ್ನು ನೋಡದೇ ನಿರ್ಧಾರ ತಗೆದುಕೊಂಡಿದೆ. ರಾಜ್ಯ ಸರ್ಕಾರ ಕಳಿಸಿರುವ ಪ್ರಸ್ತಾವನೆ ಮೇರೆಗೆ ಅನುಮತಿ ನೀಡಿದೆ ಎಂದರು.