ಬೆಂಗಳೂರು: ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಆಗದಿದ್ದ ಪರಿಣಾಮ ಇದೀಗ 60 ಲಕ್ಷ ರೇಷನ್ ಕಾರ್ಡ್ ಗಳನ್ನು ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರದ್ದುಪಡಿಸಲು ಹೊರಟಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಟೀಕಿಸಿದ್ದಾರೆ.
ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ರೇಷನ್ ಕಾರ್ಡ್ ಕಿತ್ತುಕೊಳ್ಳುತ್ತಿದ್ದಾರೆಂದು ಬಡ ಜನರು ಆತಂಕಕ್ಕೀಡಾಗಿದ್ದಾರೆ. ಈ ವಿಚಾರದಲ್ಲಿ ಎಲ್ಲೆಡೆ ಗೊಂದಲ ಸೃಷ್ಟಿಯಾಗಿದೆ ಎಂದರು. ಇದನ್ನೂ ಓದಿ:‘ಭೀಮ’ ಸಿನಿಮಾ ಒಟಿಟಿಗೆ ಲಗ್ಗೆ
ಗ್ಯಾರಂಟಿಗಳಿಗೆ ಕೊಡಲು ಹಣವಿಲ್ಲ. ಹೀಗಾಗಿ ರೇಷನ್ ಕಾರ್ಡ್ ಕಿತ್ತರೆ ಮೂರು ನಾಲ್ಕು ಸಾವಿರ ಕೋಟಿ ರೂಪಾಯಿ ಹಣ ಸಿಗುತ್ತದೆ ಎಂದು ಅಂತ ಅದಕ್ಕೆ ಕೈ ಹಾಕಿದ್ದಾರೆ. ಸರ್ಕಾರದ ಆಡಳಿತ ಯಂತ್ರ ಪೂರ್ತಿ ಐಸಿಯುನಲ್ಲಿರುವಂತೆ ಕಾಣುತ್ತಿದೆ ಎಂದು ಅಶೋಕ್ ಹೇಳಿದರು.