ಮಂಡ್ಯ: ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಕೆಲ ಕಿಡಿಕೇರಿಗಳು ಕಲ್ಲು ಹೋರಾಟ ಮಾಡಿರುವುದರಿಂದ ಲಾಟಿಚಾರ್ಜ್ ಮಾಡಲಾಗಿದ್ದು, ಈ ಕುರಿತು ಇದೀಗ ಮಂಡ್ಯ ಜಿಲ್ಲಾ ಉಸ್ತುವಾರಿಯ ಸಚಿವರಾದ ಚೆಲುವರಾಯಸ್ವಾಮಿಯವರು ಪ್ರತಿಕ್ರಿಯೆಸಿದ್ದು, ಮದ್ದೂರಿನಲ್ಲಿ ನಡೆದ ಗಲಾಟೆ ಇದು ಪೂರ್ವ ನಿಯೋಜಿತ ಕೃತ್ಯವೆಂದು ಸಚಿವ ಚಲುವರಾಯಸ್ವಾಮಿ ಅವರು ಆರೋಪಿಸಿದ್ದಾರೆ.
ಈ ಕುರಿತು ಇಂದು (ಸೋಮವಾರ ಸೆ. 08) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೆರವಣಿಗೆ ನಡೆಯುವ ಸಂದರ್ಭದಲ್ಲಿ ಮಸೀದಿ ಕಡೆಯಿಂದ ಕಲ್ಲುಗಳು ಎಸೆದ ಬಗ್ಗೆ ಮಾಹಿತಿ ಇದೆ. ವಿಚಾರಣೆ ನಡೆಸಿ ನಂತರ 21 ಜನರನ್ನು ಬಂಧಿಸಲಾಗಿದೆ. ಯಾವ ಹಿಂದೂಗಳ ಮೇಲೂ ಕೇಸ್ ದಾಖಲಾಗಿಲ್ಲ. ಇಷ್ಟು ಬೇಗ ಕ್ರಮ ತೆಗೆದುಕೊಂಡ ಪ್ರಕರಣ ಬೇರೆ ಯಾವುದೂ ಇಲ್ಲ. ಆದರೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರಚೋದಿಸುತ್ತಿದ್ದಾರೆ. ಇನ್ನಷ್ಟು ಬಿಗಿಕ್ರಮಗಳನ್ನು ತೆಗೆದುಕೊಳ್ಳಲು ಹೇಳಬಹುದಿತ್ತು. ಅದು ಬಿಟ್ಟು ಕೋಮುಗಲಭೆಗೆ ಪ್ರಚೋದನೆ ಕೊಡುವುದು ಸರಿಯಲ್ಲ ಎಂದರು. ಇದನ್ನೂ ಓದಿ: ನಾವು ಪಾಕಿಸ್ತಾನದಲ್ಲಿದ್ದೀವೋ ಕರ್ನಾಟಕದಲ್ಲಿದ್ದೀವೋ? : ಆರ್ ಅಶೋಕ್
ಮದ್ದೂರಿನಲ್ಲಿ ಹಿಂದೆ ಎಂದೂ ಈ ರೀತಿ ನಡೆದಿರಲಿಲ್ಲ. ಹೊರಗಡೆಯಿಂದ ಬಂದು ಯಾರೋ ಗಲಭೆ ಮಾಡಿರಬಹುದು ಎಂಬುದನ್ನೂ ವಿಚಾರಣೆ ಮಾಡುತ್ತಿದ್ದೇವೆ. ಯಾವುದೇ ಸಮಾಜವಿದ್ದರೂ ಅವರ ಮೇಲೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಬಿಜೆಪಿ, ಜೆಡಿಎಸ್‌ನವರು ರಾಜಕೀಯವಾಗಿ ನಮ್ಮನ್ನು ಎದುರಿಸಲು ಆಗದೇ ಪ್ರಚೋದನೆ ಮಾಡುತ್ತಿದ್ದಾರೆ ಎಂದುರು.