ಎಸ್.ನಾರಾಯಣ್ ಕುಟುಂಬದ ವಿರುದ್ದ ದೂರು ದಾಖಲು!

ಎಸ್.ನಾರಾಯಣ್ ಕುಟುಂಬದ ವಿರುದ್ದ ದೂರು ದಾಖಲು!

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಹಾಗೂ ಖ್ಯಾತ ನಿರ್ದೇಶಕರಾದ ಎಸ್ ನಾರಾಯಣ ಹಾಗೂ ಅವರ ಕುಟುಂಬದ ವಿರುದ್ಧ ದೂರು ದಾಖಲಾಗಿದೆ.

ಹೌದು. ಎಸ್ ನಾರಾಯಣ್ ಹಾಗೂ ಅವರ ಕುಟುಂಬದವರು ವರದಕ್ಷಿಣೆಗಾಗಿ ಕಿರುಕುಳ ಮಾಡುತ್ತಿದಾರೆ ಎಂದು ಅವರ ಸೊಸೆಯಾದ ಪವಿತ್ರ ಅವರು ದೂರು ದಾಖಲಿಸಿದ್ದಾರೆ. ನಿನ್ನೆ (ಗುರುವಾರ ಸೆಪ್ಟೆಂಬರ್ 11) ರಂದು ಪವಿತ್ರ ಅವರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದೀಗ ಎಸ್ ನಾರಾಯಣ್ ಅವರ ಎರಡನೇ ಮಗ ಹಾಗೂ ಅವರ ತಾಯಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮದುವೆಯಲ್ಲಿ ವರದಕ್ಷಿಣೆ ಕೊಟ್ಟಿದ್ದರೂ ಹೆಚ್ಚಿನ ಹಣಕ್ಕೆ ಒತ್ತಾಯ ಮಾಡುತ್ತಿದ್ದಾರೆ. ಹಲ್ಲೆ ನಡೆಸಿ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ದೂರಿನನ್ವಯ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಮೂರು ದಿನದೊಳಗಾಗಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಟಾನದ ತಾಲೂಕ ಮಟ್ಟದ ಪ್ರಗತಿ ಪರಿಶೀಲನೆ ಸಭೆ

ಈಗಾಗಲೇ ಪವಿತ್ರಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರ್.ಆರ್. ನಗರದಲ್ಲಿರುವ ಎಸ್.ನಾರಾಯಣ್ ನಿವಾಸದಲ್ಲಿ ಮಹಜರು ನಡೆಸಿದ್ದಾರೆ. ಜೊತೆಗೆ ಮಹಜರು ವೇಳೆ ಎಸ್.ನಾರಾಯಣ್ ಹಾಗೂ ಕುಟುಂಬಸ್ಥರಿಂದ ಪ್ರಾಥಮಿಕ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos