ಕೊಪ್ಪಳ : ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಪರಿಣಾಮ ೩೦ಕ್ಕೂ ಅಧಿಕ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಬೇವೂರು ಗ್ರಾಮದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಅಸ್ವಸ್ಥಗೊಂಡಿರುವ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗಿದ್ದು, ಸ್ಥಳಕ್ಕೆ ಶಿಕ್ಷಣ ಇಲಾಖಾ ಅಧಿಕಾರಿಗಳು ದೌಡಾಯಿಸಿದ್ದಾರೆ.