ಬೆಂಗಳೂರು: ಹಿರಿಯ ಸಾಹಿತಿ ಡಾ. ಕೋ.ಚನ್ನಬಸಪ್ಪ ವಿಧಿವಶರಾದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಟ್ವಿಟರ್ನಲ್ಲಿ ಸಂತಾಪ ಸೂಚಿಸಿದ್ದಾರೆ.
‘ಕರ್ನಾಟಕ ಏಕೀಕರಣದ ಹೋರಾಟಗಾರ ಕೋ.ಚನ್ನಬಸಪ್ಪ, ಕನ್ನಡ ಪ್ರಜ್ಞೆಯನ್ನು ಉಸಿರಾಗಿಸಿಕೊಂಡ ಹಿರಿಜೀವ. ಕುವೆಂಪು ಅವರ ಪರಮಾಪ್ತ ಶಿಷ್ಯ. ವೈಯಕ್ತಿಕವಾಗಿ ಸದಾ ನನಗೆ ಮಾರ್ಗದರ್ಶನ ನೀಡುತ್ತಿದ್ದ ಹಿತೈಷಿ ಕೋ.ಚೆನ್ನಬಸಪ್ಪ. ಅವರ ಅಗಲಿಕೆಯ ಸುದ್ದಿ ಆಘಾತವನ್ನುಂಟು ಮಾಡಿದೆ.
ಆ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ’ ಎಂದು ಮಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.