ಮೈಸೂರು:ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಬಿ.ಎಸ್. ಯಡಿಯೂರಪ್ಪ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡು ಗಮನ ಸೆಳೆದರು.
ಜಿಲ್ಲೆಯ ಸುತ್ತೂರಿನಲ್ಲಿ ನಡೆದ ರಾಜ್ಯ ಕಾರ್ಯನಿರತ ಪತ್ರಕರ್ತರ 34 ನೇ ಸಮ್ಮೆಳನದ ಸಮಾರೋಪ ಸಮಾರಂಭದ ವೇದಿಕೆಯಲ್ಲಿ ಬಿಎಸ್ವೈ ಸಿದ್ದರಾಮಯ್ಯ ಒಟ್ಟಿಗೆ ಕಾಣಿಸಿಕೊಂಡರು
ಸುತ್ತೂರು ಶ್ರೀಗಳ ಸಮ್ಮುಖದಲ್ಲಿ ಸಿದ್ದರಾಮಯ್ಯ ಮತ್ತು ಬಿ.ಎಸ್. ಯಡಿಯೂರಪ್ಪ ಶೇಕ್ ಹ್ಯಾಂಡ್ ಮಾಡಿ ಅಕ್ಕಪಕ್ಕ ಕುಳಿತುಕೊಂಡಿದ್ದರು. ವೇದಿಕೆಗೆ ಯಡಿಯೂರಪ್ಪ ಆಗಮಿಸುತ್ತಿದ್ದಂತೆ ಸಿದ್ದರಾಮಯ್ಯ ಎದ್ದು ಶೇಖ್ ಹ್ಯಾಂಡ್ ಮಾಡಿದರು. ಬಳಿಕ ಇಬ್ಬರು ಇಬ್ಬರೂ ನಾಯಕರು ಅಕ್ಕಪಕ್ಕದಲ್ಲಿ ಕುಳಿತುಕೊಂಡರು.ನಂತರ ಆತ್ಮೀಯವಾಗಿ ಮಾತನಾಡಿಕೊಂಡರು.