ಮಾಜಿ ಕೇಂದ್ರ ಸಚಿವ ಧನಂಜಯ್ ಕುಮಾರ್ ವಿಧಿವಶ

ಮಾಜಿ ಕೇಂದ್ರ ಸಚಿವ ಧನಂಜಯ್ ಕುಮಾರ್ ವಿಧಿವಶ

ಬೆಂಗಳೂರು, 4, ನ್ಯೂಸ್ಎಕ್ಸ್ ಪ್ರೆಸ್‍:  ಕಿಡ್ನಿ ಸಮಸ್ಯೆಯಿಂದ ಹಲವು ದಿವಸಗಳಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ವಿ.ಧನಂಜಯ್ ಕುಮಾರ್ ಅವರು ಇಂದು ಮಧ್ಯಾಹ್ನ ಮಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.

ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ ಡಿಎ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ(1996) ಧನಂಜಯ್ ಕುಮಾರ್ ಅವರು ಮಾಜಿ ನಾಗರಿಕ ವಿಮಾನಯಾನ ಸಚಿವರಾಗಿದ್ದರು.

ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಧನಂಜಯ್ ಕುಮಾರ್ ಅವರು ನಂತರ ಯಡಿಯೂರಪ್ಪ ಅವರು ಕೆಜೆಪಿ ಪಕ್ಷ ಕಟ್ಟಿದಾಗ ಬಿಜೆಪಿ ಬಿಟ್ಟು ಕೆಜೆಪಿ ಸೇರಿದ್ದರು.

ಬಳಿಕ ನಡೆದ ರಾಜಕೀಯ ಬದಲಾವಣೆಯಲ್ಲಿ ಬಿ ಎಸ್ ವೈ ಬಿಜೆಪಿಗೆ ಹಿಂದಿರುಗಿದ ನಂತರ, ಕೆಲವು ವೈಮನಸ್ಯದಿಂದಾಗಿ ಅವರು ಕಾಂಗ್ರೆಸ್ ನಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದರು. ಧನಂಜಯ್ ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ವೇಣೂರಿನಲ್ಲಿ ನಡೆಯಲಿದೆ ಅಂತ ಕುಟುಂಬ ಮೂಲಗಳಿಂದ ತಿಳಿದು ಬಂದಿದೆ.

ಫ್ರೆಶ್ ನ್ಯೂಸ್

Latest Posts

Featured Videos