ಮಾ. 5, ನ್ಯೂಸ್ ಎಕ್ಸ್ ಬೆಂಗಳೂರು: ಕೆಪಿಎಸ್ಸಿ ನಲ್ಲಿ ‘ಎ’ ಮತ್ತು ‘ಬಿ’ ವೃಂದದ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 22/4/2019. ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ ‘ಎ’ನಲ್ಲಿ 15 ಹುದ್ದೆ, ಗ್ರೂಪ್ ‘ಬಿ’ನಲ್ಲಿ 107 ಒಟ್ಟು 122 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸತಕ್ಕದ್ದು ಎಂದು ಸ್ಪಷ್ಟಪಡಿಸಲಾಗಿದೆ. ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ ಮತ್ತು ಇ-ಮೇಲ್ ವಿಳಾಸವನ್ನು ತಪ್ಪದೇ ನಮೂದಿಸಲು ಸೂಚನೆ ನೀಡಲಾಗಿದೆ. ನೇಮಕಾತಿ ಪ್ರಕ್ರಿಯೆ ಮುಗಿಯುವರೆಗು ಇದೇ ದೂರವಾಣಿ ಸಂಖ್ಯೆ ಮತ್ತು ಇ-ಮೇಲ್ ವಿಳಾಸವನ್ನು ಪರಿಗಣಿಸಲಾಗುತ್ತದೆ.
ಕರ್ನಾಟಕ ನಾಗರೀಕ ಸೇವೆಗಳು (ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಹಾಗೂ ಆಯ್ಕೆ) (ಸಾಮಾನ್ಯ) (ತಿದ್ದುಪಡಿ) ನಿಯಮಗಳು 2015 ರಂತೆ ಗ್ರೂಪ್ ‘ಎ’ ಮತ್ತು ‘ಬಿ’ ತಾಂತ್ರಿಕ/ತಾಂತ್ರಿಕೇತರ ಹುದ್ದೆಗಳ ನೇಮಕಾತಿಯನ್ನು ಸ್ಮರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನಡೆಸಲಾಗುತ್ತದೆ.