ಬೆಂಗಳೂರು, ಮಾ.12, ನ್ಯೂಸ್ ಎಕ್ಸ್ ಪ್ರೆಸ್: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ನಾಯಕರ ಒತ್ತಡಕ್ಕೆ ಮಣಿದು ಬೆಂಗಳೂರು ಬಿಜೆಪಿ ನಾಯಕರು ಯುಟರ್ನ್ ಹೊಡೆದಿದ್ದಾರೆ ಎನ್ನಲಾಗಿದೆ.
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ತೇಜಸ್ವಿನಿ ಅನಂತ್ ಕುಮಾರ್ ಗೆ ನೀಡುವ ಕುರಿತು ಬೆಂಗಳೂರು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಆದರೆ ಇದಕ್ಕೆ ಕೇಂದ್ರ ನಾಯಕರು ಒಪ್ಪದೆ ತೇಜಸ್ವಿನಿ ಅನಂತ್ ಕುಮಾರ್ ಹೆಸರು ಶಿಫಾರಸಿಗೆ ಸೂಚನೆ ನೀಡಿದ್ದಾರೆ. ಕೇಂದ್ರದ ಬಿಜೆಪಿ ನಾಯಕರಿಂದಲೇ ಸೂಚನೆ ಬಂದ ಹಿನ್ನಲೆಯಲ್ಲಿ ಅನಿವಾರ್ಯವಾಗಿ ಆರ್.ಅಶೋಕ್ ತೇಜಸ್ವಿನಿ ಪರ ನಿಂತಿದ್ದಾರೆ ಎನ್ನಲಾಗಿದೆ.