ಮಂಗಳೂರು, ಮಾ. 12, ನ್ಯೂಸ್ ಎಕ್ಸ್ ಪ್ರೆಸ್: 53ರ ವಯಸ್ಸಿನ ವ್ಯಕ್ತಿಯೊಬ್ಬ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅಕೆಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಮಂಗಳೂರಿನಲ್ಲಿ ನಡೆದಿದೆ.
ಈ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡುಶೆಡ್ಡೆ ನಿವಾಸಿ ಜಗದೀಶ್ (53) ಎಂಬಾತನ ಮೇಲೆ ಮಂಗಳೂರಿನ ಕಾವೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಜಗದೀಶ್ ಗುತ್ತಿಗೆದಾರರಾಗಿದ್ದು, ತನ್ನ ಸೈಟ್ನಲ್ಲಿ ಕೆಲಸಕ್ಕೆ ಬರುತ್ತಿದ್ದ ಉತ್ತರ ಕರ್ನಾಟಕ ಮೂಲದ ಯುವತಿಯನ್ನು ಪರಿಚಯ ಮಾಡಕೊಂಡಿದ್ದ. ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದ ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದಾಳೆ.
ಆರೋಪಿ ಜಗದೀಶ್ ಗೆ ಈಗಾಗಲೇ ಮದುವೆಯಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಜಗದೀಶ್ ವಿರುದ್ಧ ಐಪಿಸಿ ಸೆಕ್ಷನ್ 376ರ ಪ್ರಕಾರ ಅತ್ಯಾಚಾರ ಆರೋಪ ಮಾತ್ರವಲ್ಲದೆ, ಯುವತಿಗೆ ಬೆದರಿಕೆ ಹಾಕಿರುವ ಬಗ್ಗೆ ಐಪಿಸಿ 506ರಂತೆ ಪ್ರಕರಣ ದಾಖಲಿಸಲಾಗಿದೆ.