ಬೆಂಗಳೂರು, ಮಾ.16, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುಣಾವಣೆ ದಿನಾಂಕ ಘೋಷಣೆಯಾದ ನಂತರ ಚುಣಾವಣಾ ರಣಕಣ ರಂಗೇರಿದೆ. ರಾಜ್ಯದಲ್ಲೂ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ ಎಂಬ ಲೆಕ್ಕಾಚಾರ ಭರದಿಂದ ನಡೆಯುತ್ತಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಚುನಾವಣೆ ಸ್ಪರ್ಧಿಸಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಇದನ್ನು ಬಿಜೆಪಿ ಲೇವಡಿ ಮಾಡಿದೆ.
ಕರ್ನಾಟಕ ಯಾವತ್ತಿಗೂ ಕಾಂಗ್ರೆಸ್ ಗೆ ಬೆಂಬಲ ನೀಡುತ್ತಾ ಬಂದಿದೆ. ಈ ಹಿಂದೆ ಇಂದಿರಾ ಗಾಂಧಿ ಮತ್ತು ಸೋನಿಯಾ ಗಾಂಧಿ ವಿಷಯದಲ್ಲಿ ಇದು ಸಾಬೀತಾಗಿದೆ. ನಮ್ಮ ಮುಂದಿನ ಪ್ರಧಾನಿ ರಾಹುಲ್ ಗಾಂಧಿ ಕೂಡಾ ಕರ್ನಾಟಕದಿಂದ ಸ್ಪರ್ಧಿಸಬೇಕೆಂದು ನಾವು ಬಯಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.
ಇದಕ್ಕೆ ಪ್ರತಿಕ್ರಯಿಸಿರುವ ಕರ್ನಾಟಕ ಬಿಜೆಪಿ, ತನ್ನ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಸಾಧ್ಯವಾಗದವರು ಮತ್ತೊಬ್ಬ ಗೆಲ್ಲಲಾಗದವರಿಗೆ ಮಣೆ ಹಾಕುತ್ತಿದೆ ಎಂದು ಟ್ವೀಟ್ ಮಾಡಿದೆ. ಇದರೊಂದಿಗೆ ‘ ಕೋತಿ ತಾನು ಕೆಡೋದಲ್ದೆ.’ ಎಂದು ಗಾದೆ ಮಾತನ್ನು ಕೂಡಾ ಸೇರಿಸಿದೆ.
A man who could not win election in his own constituency is laying carpet for another loser.
ಗಾದೆ ಮಾತು:
“ಕೋತಿ ತಾನೂ ಕೆಡೋದಲ್ದೆ …….. “ https://t.co/lGdlzCACrE— BJP Karnataka (@BJP4Karnataka) March 16, 2019