‘ಸುಮಲತಾರ ಬಗ್ಗೆ ಸಿಎಂ ಹಗುರವಾಗಿ ಮಾತನಾಡುವುದು ಸರಿಯಲ್ಲ’: ಯಡಿಯೂರಪ್ಪ

‘ಸುಮಲತಾರ ಬಗ್ಗೆ ಸಿಎಂ ಹಗುರವಾಗಿ ಮಾತನಾಡುವುದು ಸರಿಯಲ್ಲ’: ಯಡಿಯೂರಪ್ಪ

ಬೆಂಗಳೂರು, ಮಾ.21, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸುಮಲತಾ ಅವರ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಮತಾ ಅವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಈ ಭಾಗದ ಜನ ಸಹಿಸುವುದಿಲ್ಲ ಎಂದರು.

ಸುಮಲತಾ ಅವರ ಸಮಾವೇಶದಲ್ಲಿ ಕರೆಂಟ್ ಕಟ್ ಮಾಡಿಸಿದ್ದು, ಕೇಬಲ್ ಕಟ್ ಮಾಡಿಸಿದ ಸರ್ಕಾರದ ಕ್ರಮ ಸರಿಯಲ್ಲ ಎಂದು ಕಿಡಿಕಾರಿದರು.

ಫ್ರೆಶ್ ನ್ಯೂಸ್

Latest Posts

Featured Videos