ಬೆಂಗಳೂರು, ಮಾ.22, ನ್ಯೂಸ್ ಎಕ್ಸ್ ಪ್ರೆಸ್: ಕಾಂಗ್ರೆಸ್ ನ ಹಿರಿಯ ಮುಖಂಡ ಡಾ.ಎ.ಬಿ. ಮಾಲಕರಡ್ಡಿ ಅವರು ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ನಗರದ ಖಾಸಗಿ ಹೋಟೆಲ್ ನಲ್ಲಿ ಡಾ.ಎ.ಬಿ.ಮಾಲಕರಡ್ಡಿ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಬಿ.ಎಸ್. ಯಡಿಯೂರಪ್ಪ ಮಾಲಕರಡ್ಡಿ ಅವರಿಗೆ ಬಿಜೆಪಿ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಮಾಲಕರಡ್ಡಿ, ಬಿಎಸ್ ಯಡಿಯೂರಪ್ಪ ಅವರ ಜೊತೆಗೆ ಕೆಲಸ ಮಾಡುವುದು ಹೆಮ್ಮೆಯ ವಿಷಯ. ಅವರಿಗೆ ರಾಜಕಾರಣ ಆಕರ್ಷಕವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ ಕಾರ್ಯಗಳನ್ನು ನೋಡಿ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ ಎಂದರು.