ಉತ್ತಮ ವೃತ್ತಿ ಎಂದರೆ ಶಿಕ್ಷಕರ ವೃತ್ತಿ

ಉತ್ತಮ ವೃತ್ತಿ ಎಂದರೆ ಶಿಕ್ಷಕರ ವೃತ್ತಿ

ಮಧುಗಿರಿ: ವಿದ್ಯಾರ್ಥಿಗಳ ಉದ್ಯೋಗಕ್ಕೆ ಅನುಗುಣವಾಗುವಂತೆ ಯುಕ್ತ ಕೌಶಲ್ಯ ತರಬೇತಿ ಕೇಂದ್ರದ ವತಿಯಿಂದ ತುಮಕೂರು ಜಿಲ್ಲಾದ್ಯಂತ ಇರುವ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ ಉಚಿತ (ಕಂಪ್ಯೂಟರ್, ಸ್ಪೋಕನ್ ಇಂಗ್ಲಿಷ್, ವ್ಯಕ್ತಿತ್ವ ವಿಕಸನ ಹಾಗೂ ವೃತ್ತಿಪರ ತರಬೇತಿ)ಗಳನ್ನು ಪುನರಾರಂಭಿಸುವ ನಿಟ್ಟಿನಲ್ಲಿ ನಿಯೋಜಿತ ಶಿಕ್ಷಕರುಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಪ್ರೊ ಶ್ರೀರೇವಣ್ಣಸಿದ್ದಪ್ಪ ಕಾರ್ಯಕ್ರಮ ಉದ್ದೇಶಿಸಿ ಮಾತನಾಡುತ್ತ ಶಿಕ್ಷಕರುಗಳು ಮಾಡುತ್ತಿರುವ ಕೆಲಸ ಸಮಾಜದಲ್ಲಿ ಉತ್ತಮ ಮತ್ತು ಜವಾಬ್ದಾರಿಯುತ ವೃತ್ತಿಯಾಗಿದ್ದು ಈ ನಿಟ್ಟಿನಲ್ಲಿ ಶಿಕ್ಷಕರುಗಳಾದ ನಾವು ವಿದ್ಯಾರ್ಥಿಗಳ ಭವಿಷ್ಯವನ್ನು ತಿದ್ದಿ ಅವರು ಸಮಾಜಕ್ಕೆ ಒಳ್ಳೆ ಯ ವ್ಯಕ್ತಿಗಳನ್ನಾಗಿ ಮಾಡುವ ಕೆಲಸ ಶಿಕ್ಷಕರ ಜವಾಬ್ದಾರಿ ಯಾಗಿರುತ್ತದೆ ಎಂದು ಸಲಹೆ ಮತ್ತು ತರಬೇತಿ ನೀಡುವುದರ ಮೂಲಕ ಕಾರ್ಯಾಗಾರವನ್ನು ಯಶಶ್ವಿಗೊಳ್ಳಿಸಿದರು.
ಯುಕ್ತ ಕೌಶಲ್ಯ ತರಬೇತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ದಿಲೀಪ್ ಕುಮಾರ್ ಟಿ.ಹೆಚ್ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರುಗಳ ಪಾತ್ರ ತುಂಬಾ ಅಮೂಲ್ಯವಾದದ್ದು, ಕೋವಿಡ್ 19 ರ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ದುಡಿಯುತ್ತಿರುವ ಎಲ್ಲಾ ಶಿಕ್ಷಕರಿಗೂ ಅಭಿನಂದನೆಗಳನ್ನು ಸಲ್ಲಿಸಿ ಮಾತನಾಡಿ, ಯುಕ್ತ ಕೌಶಲ್ಯ ತರಬೇತಿ ಕೇಂದ್ರ ಕೇವಲ ಒಂದು ಸಂಸ್ಥೆಯಾಗಿದೆ ಯುವಕರಿಗೆ ಉದ್ಯೋಗವನ್ನು ಸೃಷ್ಟಿಸುವ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos