ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ

ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ

ಮಹದೇವಪುರ: ರಸ್ತೆ, ಒಳ ಚರಂಡಿ, ಕುಡಿಯುವ ನೀರು ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳು ಒದಗಿಸಲು 100 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳಿಗೆ ಶಾಸಕ ಅರವಿಂದ ಲಿಂಬಾವಳಿ ಗುದ್ದಲಿ ಪೂಜೆ ನೆರವೇರಿಸಿದರು.
ಕ್ಷೇತ್ರದ ಮಾರತ್ತಹಳ್ಳಿ ಬೆಳ್ಳಂದೂರು, ವಾರ್ಡ ಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ, ಸ್ಕೈ ವಾಕ್ ಉದ್ಘಾಟನೆ ನೇರವೇರಿಸಿ ನಂತರ ಮಾತನಾಡಿದ ಅವರು,
ಕೆಂಪಾಪುರ, ಚಲಘಟ್ಟ, ಯಮಲೂರು, ಸಂಜಯನಗರ, ಅಶ್ವತ್ಥ ನಗರ ಮುಖ್ಯರಸ್ತೆ, ಮುನ್ನೇಕೊಳಾಲ ಎಸ್.ಕೆ.ಬಿ. ಬಡಾವಣೆ, ಇಬ್ಬಲೂರು ಜಂಕ್ಷನ್, ಮಾರತ್ತಹಳ್ಳಿ, ಕರಿಯಮ್ಮನ ಅಗ್ರಹಾರ, ಬೆಳ್ಳಂದೂರು, ಅಂಬ್ಲಿಪುರ ಮುಖ್ಯರಸ್ತೆ, ದೊಡ್ಡ ಕನ್ನಹಳ್ಳಿ ಜನತಾ ಕಾಲೋನಿಯಲ್ಲಿ ರಸ್ತೆ, ಚರಂಡಿ ಒಳಚಂಡಿ ಕುಡಿಯುವ ನೀರು ಶೌಚಾಲಯ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳ ಒದಗಿಸಲು 100 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಕಾಲಮಿತಿಯೊಳಗೆ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣ ಗೊಳಿಸುವಂತೆ ಹಾಗೂ ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos