ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಮುಖಂಡ ಸಿ ಪಿ ಯೋಗೇಶ್ವರ್ ಅವರು ಪಕ್ಷ ತೊರೆದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಇಂದು (ಬುಧವಾರ ಅಕ್ಟೋಬರ್ 23) ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಒಳಪಟ್ಟಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಇದೀಗ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಢವ ಢವ ಶುರುವಾಗಿದೆ.
ಉಪ ಚುನಾವಣೆಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಪಕ್ಷಗಳಲ್ಲಿ ಟಿಕೆಟ್ ಗಾಗಿ ಬಾರಿ ಪೈಪೋಟಿ ನಡೆದಿದ್ದು ಇದೀಗ ಕಾಂಗ್ರೆಸ್ ಪಕ್ಷ ಅತಿ ಜಾಗೃತೆಯಿಂದ ಯೋಚಿಸಿ ಸಿಪಿ ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವ ಮೂಲಕ ಹೆಚ್ ಡಿ ಕುಮಾರಸ್ವಾಮಿಯವರಿಗೆ ಟಕ್ಕರು ಕೊಟ್ಟಿದ್ದಾರೆ.
ಸಚಿವರಾದ ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಖಾನ್, ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಡಾ. ಎಂ ಸಿ ಸುಧಾಕರ್, ಮಾಜಿ ಸಂಸದ ಡಿ ಕೆ ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ, ರಾಜ್ಯಸಭೆ ಸದಸ್ಯ ಡಾ. ಜಿ.ಸಿ. ಚಂದ್ರಶೇಖರ್, ರಾಮನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್, ಶಾಸಕರಾದ ಮಾಗಡಿ ಬಾಲಕೃಷ್ಣ, ಡಾ ರಂಗನಾಥ್, ಕದಲೂರು ವಿಜಯ್, ರವಿ ಗಣಿಗ, ಪೊನ್ನಣ್ಣ, ಎಂಎಲ್ಸಿಗಳಾದ ಪುಟ್ಟಣ್ಣ, ನಜೀರ್ ಅಹ್ಮದ್, ದಿನೇಶ್ ಗೂಳಿಗೌಡ ಮತ್ತಿತರರು ಉಪಸ್ಥಿತರಿದ್ದರು.