ಮೈಸೂರು ಬೆಂಗಳೂರು ನಡುವೆ ಪ್ರತಿ 10 ನಿಮಿಷಕ್ಕೊಂದು ರೈಲು!

ಮೈಸೂರು ಬೆಂಗಳೂರು ನಡುವೆ ಪ್ರತಿ 10 ನಿಮಿಷಕ್ಕೊಂದು ರೈಲು!

ಬೆಂಗಳೂರು: ಮೈಸೂರು ಮತ್ತು ಬೆಂಗಳೂರು ನಡುವೆ ಪ್ರತಿ 10 ನಿಮಿಷಗಳಿಗೊಮ್ಮೆ ರೈಲು ಸಂಚಾರ ನಡೆಸುವ ಬಗ್ಗೆ ರೈಲ್ವೆ ಮಂಡಳಿಯು ನಿರ್ಧಾರ ಕೈಗೊಂಡಿದೆ ಎಂದು ವರದಿಯಾಗಿದೆ. ಪ್ರಯಾಣ ಮೂಲಸೌಕರ್ಯವನ್ನು ಹೆಚ್ಚಿಸುವ ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇದು ಮಹತ್ವದ ಕ್ರಮವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಜತೆಗೆ, ಇದರಿಂದಾಗಿ ಉಭಯ ನಗರಗಳ ನಡುವಣ ಪ್ರಯಾಣಿಕರಿಗೆ ತ್ವರಿತ, ಸುರಕ್ಷಿತ ಮತ್ತು ಹೆಚ್ಚು ಆರಾಮದಾಯಕ ಪ್ರಯಾಣದ ಅನುಭವ ದೊರೆಯಲಿದೆ.

ಈ ರೈಲು ಯೋಜನೆಯು ಉಭಯ ನಗರಗಳ ನಡುವಣ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos