ನಾಳೆಯಿಂದ ನಿಷೇಧಾಜ್ಞೆ ಜಾರಿ

ನಾಳೆಯಿಂದ ನಿಷೇಧಾಜ್ಞೆ ಜಾರಿ

ಬೆಂಗಳೂರು, ನ. 10 : ನಗರದಲ್ಲಿ ಉಪಚುನಾವಣೆ ನಡೆಯುವ ನಾಲ್ಕು ಕ್ಷೇತ್ರಗಳ ಚುನಾವಣಾಧಿಕಾರಿಗಳ ಸುತ್ತಮುತ್ತ ನಾಳೆಯಿಂದ ಒಂದು ವಾರ ಕಾಲ ನಿಷೇಧಾಜ್ಞೆ ಜಾರಿಗೊಳಿಸುವುದಾಗಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ತಿಳಿಸಿದ್ದಾರೆ.
ಉಪ ಚುನಾವಣೆ ಸಂದರ್ಭದಲ್ಲಿ ಸಮಾಜಘಾತುಕ ಶಕ್ತಿಗಳು ಪರಿಸ್ಥಿತಿಯನ್ನು ದುರುಪಯೋಗ ಪಡಿಸಿಕೊಂಡು ಸಾರ್ವಜನಿಕ ಮತ್ತು ಸರ್ಕಾರಿ ಆಸ್ತಿಗಳಿಗೆ ಹಾನಿಯುಂಟು ಮಾಡುವ ಸಂಚುರೂಪಿಸಿರುವುದಾಗಿ ಗುಪ್ತ ವಾರ್ತೆ ವರದಿಯಿಂದ ತಿಳಿದು ಬಂದಿದೆ.
ಹೀಗಾಗಿ ನಾಮಪತ್ರ ಸಲ್ಲಿಕೆಯಾಗುವ ದಿನವಾದ ನಾಳೆ (ನ.11)ಬೆಳಗ್ಗೆ 10ಗಂಟೆಯಿಂದ ನಾಮಪತ್ರ ಸಲ್ಲಿಕೆ ಮುಕ್ತಾಯವಾಗುವ ನ.18 ಸಂಜೆ 4 ಗಂಟೆವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ನಡುವೆ ನ.15ರ ಕನಕಜಯಂತಿ, ನ.17ರ ಭಾನುವಾರದಂದು ನಿಷೇಧಾಜ್ಞೆಯನ್ನು ಸಡಿಲಗೊಳಿಸುವುದಾಗಿ ಆಯುಕ್ತರು ತಿಳಿಸಿದ್ದಾರೆ. ನಿಷೇಧಾಜ್ಞೆ ಸಂದರ್ಭದಲ್ಲಿ ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದಕ್ಕಿಂತ ಹೆಚ್ಚು ಜನ ಗುಂಪು ಸೇರುವುದನ್ನು , ಪ್ರತಿಭಟನೆ, ಮೆರವಣಿಗೆ, ಸಭೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos