ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನ ಆರೋಗ್ಯ ವಿಚಾರಿಸಿದ ಸಿಎಂ

ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನ ಆರೋಗ್ಯ ವಿಚಾರಿಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಿಮ್ಹಾನ್ಸ್ ಗೆ ಭೇಟಿ ನೀಡಿ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆ ಗೆ ಪ್ರಯತ್ನಿಸಿದ ಯುವಕನ ಆರೋಗ್ಯ ವಿಚಾರಿಸಿದರು.

ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಲಾಲ್‍ಬಾಗ್ ಕಡೆಯಿಂದ ಮೆಜೆಸ್ಟಿಕ್‍ಗೆ ಮೆಟ್ರೋ ರೈಲು ಬರುತ್ತಿತ್ತು. ಮಾರ್ಗಮಧ್ಯೆ  ನ್ಯಾಷನಲ್ ಕಾಲೇಜು ಮೆಟ್ರೋ ನಿಲ್ದಾಣದ ಬಳಿ ರೈಲು ನಿಲುಗಡೆಗಾಗಿ ನಿಧಾನವಾಗಿ ಚಲಿಸುತ್ತಾ ಬರುತ್ತಿದ್ದಂತೆ ಏಕಾಏಕಿ ಈತ ಓಡಿಬಂದು ಆತ್ಮಹತ್ಯೆ ಮಾಡಿಕೊಳ್ಳಲು ಹಳಿ ಮೇಲೆ ಜಿಗಿದಿದ್ದನು.

ತಕ್ಷಣ ರೈಲು ಚಾಲಕರು ಬ್ರೇಕ್ ಹಾಕಿದರಾದರೂ ಕೊಂಚ ದೂರ ಕ್ರಮಿಸಿತ್ತು. ಕೂಡಲೇ ಮೆಟ್ರೋ ರೈಲು ಸಿಬ್ಬಂದಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದರು.

ತಲೆಗೆ ತೀವ್ರ ಪೆಟ್ಟಾಗಿದ್ದರಿಂದ 108 ಆ್ಯಂಬುಲೆನ್ಸ್ ನಲ್ಲಿ ಕರೆದೊಯ್ದು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos