ಬಸ್, ಟ್ರಕ್ ಡಿಕ್ಕಿ 5 ಸಾವು

ಬಸ್, ಟ್ರಕ್ ಡಿಕ್ಕಿ 5 ಸಾವು

ಆಗ್ರಾ, ಜೂ. 28: ಇಂದು ಬೆಳಗ್ಗೆ ಆಗ್ರಾ-ಲಕ್ನೋ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಡಬ್ಬಲ್ ಡೆಕ್ಕರ್ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 5 ಜನ ಪ್ರಯಾಣಿಕರು ಸಾವನ್ನಪ್ಪಿದ್ದು, 50 ಜನ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಹಾರದಿಂದ ಜೈಪುರಕ್ಕೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಹರ್ಯಾಣದ ಫತೆಹಾಬಾದ್ ನ ತಿರುವಿನಲ್ಲಿ ಮರಳನ್ನು ತುಂಬಿಸಿಕೊಂಡು ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಮಗು ಸೇರಿದಂತೆ 5 ಜನರು ಮೃತಪಟ್ಟಿರುವುದಾಗಿ ವರದಿ ವಿವರಿಸಿದೆ.

ಘಟನಾ ಸ್ಥಳಕ್ಕೆ ಪೊಲೀಸ್ ಮತ್ತು ಉತ್ತರಪ್ರದೇಶ ಜಿಲ್ಲಾಡಳಿತದ ಅಧಿಕಾರಿಗಳು ಭೇಟಿ ನೀಡಿ, ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos