ಆಟೋಗೆ ಕಾರು ಡಿಕ್ಕಿ: ಓರ್ವ ಸಾವು, ನಾಲ್ವರಿಗೆ ಗಾಯ!

ಆಟೋಗೆ ಕಾರು ಡಿಕ್ಕಿ: ಓರ್ವ ಸಾವು, ನಾಲ್ವರಿಗೆ ಗಾಯ!

ಬೆಂಗಳೂರು: ಇನೋವಾ ಕಾರು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.

ಬೆಂಗಳೂರಿನಿಂದ ಮೈಸೂರಿಗೆ ಹೋಗುತ್ತಿದ್ದ ಕಾರು ರಸ್ತೆ ವಿಭಜಕ ದಾಟಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲ್ಲಿದ್ದ ಐವರಲ್ಲಿ ಒಬ್ಬರು ಸಾವನ್ನಪ್ಪಿದ್ದು, ಗಾಯಗೊಂಡ ನಾಲ್ವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos