ಲಾರಿ ಬೈಕ್‌ ನಡುವೆ ಭೀಕರ ಅಪಘಾತ

ಲಾರಿ ಬೈಕ್‌ ನಡುವೆ ಭೀಕರ ಅಪಘಾತ

ಯಾದಗಿರಿ: ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚು ತಾನೇ ಇದೆ, ಹೊರತು ಕಮ್ಮಿಯಾಗುತ್ತಾ ಇಲ್ಲ, ಎಷ್ಟೇ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದರು ಸಹ ಅಪಘಾತಗಳ ಸಂಖ್ಯೆ ಹೆಚ್ಚುತ್ತಾನೆ ಇದೆ.  ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದಾರೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಭಾವಿ ಬಳಿ ಈ ಅಪಘಾತ ಸಂಭವಿಸಿದೆ.

ಸವಾರರಾದ ಶಿವನಗೌಡ ಹೊಸಮನಿ(25), ಲಕ್ಷ್ಮಣ(24) ಸಾವನ್ನಪ್ಪಿರುವವರು. ಮೃತರು ಶಹಾಪುರ ತಾಲೂಕಿನ ಬೊಮ್ಮನಹಳ್ಳಿಯ ನಿವಾಸಿಗಳು. ಕೆಂಭಾವಿಯಿಂದ ಬೊಮ್ಮನಹಳ್ಳಿ ಗ್ರಾಮಕ್ಕೆ ಬೈಕ್ ಮೇಲೆ ತೆರಳುವಾಗ ಘಟನೆ ಸಂಭವಿಸಿದೆ. ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಫ್ರೆಶ್ ನ್ಯೂಸ್

Latest Posts

Featured Videos