ರಸ್ತೆ ಅಪಘಾತ: ಸ್ಥಳದಲ್ಲೇ 3 ಸಾವು

ರಸ್ತೆ ಅಪಘಾತ: ಸ್ಥಳದಲ್ಲೇ 3 ಸಾವು

ತುಮಕೂರು, ಮೇ. 8, ನ್ಯೂಸ್ ಎಕ್ಸ್ ಪ್ರೆಸ್: ಇಂದು ಬೆಳಗ್ಗೆ ತುಮಕೂರಿನ ನೆಲಹಾಳ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 3 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪಲ್ಸರ್ ಬೈಕ್ ನಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ 3 ಜನ ಯುವಕರು ಏಕಾಏಕಿ ರಾಷ್ಟ್ರೀಯ ಹೆದ್ದಾರಿಯಲ್ಲಿರೋ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ 3 ಜನ ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕೋರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos